ಕನ್ನಡ ಸಿನಿಮಾ ರಂಗದ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಮೂರು ದಿನಗಳ ಹಿಂದೆ ಏರುಪೇರಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು ಎಂದು ವೈದ್ಯರು ತಿಳಿಸಿದ್ದರು. ಸದ್ಯ ಸಿಕ್ಕಿರುವ ಮಾಹಿತಿಯ ಪ್ರಕಾರ, ಭಗವಾನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
ನಟ, ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು. 89 ವರ್ಷದ ಭಗವಾನ್ ಅವರು ಇತ್ತೀಚೆಗೆ ಶೀತ ಮತ್ತು ಜ್ವರದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ 3 ದಿನದ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಡಾ.ಮಂಜುನಾಥ್ ಅವರು ಭಗವಾನ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
Advertisement
Advertisement
ಭಗವಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಸುದ್ದಿಯು ಸಿಗುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು. ಅಲ್ಲದೇ, ಸಿನಿಮಾ ರಂಗದ ಹಿತೈಷಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಂಡಿದೆ ಎನ್ನುತ್ತಿದ್ದಾರೆ ಅವರ ಆಪ್ತರು.
Advertisement
1966ರಲ್ಲಿ ʻಸಂಧ್ಯಾರಾಗʼ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಭಗವಾನ್ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ದೊರೈರಾಜ್ ಅವರ ಜೊತೆಗೂಡಿ ಸಾಕಷ್ಟು ಸಿನಿಮಾಗಳನ್ನ ನಿರ್ದೇಶನ ಮಾಡಿದ್ದರು.