ವಿಜಯಪುರ: ವೈದ್ಯರೊಬ್ಬರು(Doctor) ಆಸ್ಪತ್ರೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ (Vijayapura) ತಾಳಿಕೋಟೆ (Thalikote) ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ನಡೆದಿದೆ.
ಸಾಯಿ ಆಸ್ಪತ್ರೆಯ ಡಾ.ರಾಜಶೇಖರ ಮುಚ್ಚಂಡಿ ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಇದೀಗ ವೈದ್ಯರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಯುವತಿಯೆಂದು ಯುವಕನಿಗೆ ಅಶ್ಲೀಲ ಮೆಸೇಜ್ – ಕಾಮುಕನಿಗೆ ಬಿತ್ತು ಧರ್ಮದೇಟು
ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣೆಯ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಅಮೆರಿಕಕ್ಕೆ ಭಾರತದಿಂದ 5 ವಿಮಾನ ಭರ್ತಿ ಐಫೋನ್ ಕಳುಹಿಸಿದ ಆಪಲ್