– ಇಡಿ ವಿಚಾರಣೆಗೆ ಹೆದರಿ ನಾಪತ್ತೆಯಾದ್ರಾ ಅಧಿಕಾರಿ?
– ಪಶುವೈದ್ಯಾಧಿಕಾರಿ ಪರೀಕ್ಷೆ, ಕೆಎಎಸ್ ಎಕ್ಸಾಂ ನಡೆಸಿದ್ದ ಜ್ಞಾನೇಂದ್ರ ಕುಮಾರ್
ಬೆಂಗಳೂರು: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇಡಿ ದಾಳಿ ಹೊತ್ತಲ್ಲೇ ಅಧಿಕಾರಿ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಜ್ಞಾನೇಂದ್ರ ಕುಮಾರ್ ಅವರು KPSCಯಲ್ಲಿ ಎಕ್ಸಾಂ ಕಂಟ್ರೋಲರ್ ಆಗಿ ಕೆಲಸ ಮಾಡಿದ್ದರು. ಪಶುವೈದ್ಯಾಧಿಕಾರಿ ಪರೀಕ್ಷೆ, KAS ಎಕ್ಸಾಂ ಅನ್ನು ಕೂಡ ನಡೆಸಿದ್ದರು. KAS ಪರೀಕ್ಷೆ ಅಕ್ರಮ ಆರೋಪದ ಮೇಲೆ ಶಾಂತ ಹೊಸಮನಿ ವಿರುದ್ಧ ಎಫ್‌ಐಆರ್ ಆಗಿತ್ತು. ಇಡಿ ಕೂಡ ಶಾಂತ ಹೊಸಮನಿ ವಿರುದ್ಧ ದಾಳಿ ನಡೆಸಿತ್ತು. ಆದರೆ, ಈಗ ಜ್ಞಾನೇಂದ್ರ ಕುಮಾರ್ ನಾಪತ್ತೆ ಹಿಂದೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ.
ತಾರತುರಿಯಲ್ಲಿ ಏರ್ ಟಿಕೆಟ್ ಬುಕ್ ಮಾಡಿದ್ದ ಅಧಿಕಾರಿ ಆಗಸ್ಟ್ 20 ರಂದು ದೆಹಲಿಗೆ ತೆರಳಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯ ಫ್ಲೈಟ್‌ಗೆ 1 ಗಂಟೆ 31 ನಿಮಿಷಕ್ಕೆ ಟಿಕೆಟ್ ಬುಕ್ಕಿಂಗ್ ಆಗಿದೆ. ಒಂದೂವರೆ ಗಂಟೆ ಮುಂಚಿತವಾಗಿ ಜ್ಞಾನೇಂದ್ರ ಕುಮಾರ್ 30,253 ರೂಪಾಯಿ ಹಣ ನೀಡಿ ತರಾತುರಿಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿದ್ದಾರೆ. HDFC ಕ್ರೆಡಿಟ್ ಕಾರ್ಡ್‌ನಲ್ಲಿ ಇಂಡಿಗೋ ಫ್ಲೈಟ್‌ಗೆ ಟಿಕೆಟ್ ಬುಕ್ ಮಾಡಿದ್ದಾರೆ.

