ಮೈಸೂರು: ಆನೆ ದಾಳಿಗೆ ನಾಗರಹೊಳೆ ಹುಲಿ ಸಂರಕ್ಷಣಾ ಯೋಜನೆಯ ನಿರ್ದೇಶಕ ಮಣಿಕಂಠನ್ (45) ಮೃತಪಟ್ಟಿದ್ದಾರೆ. ಹೆಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿರುವ ನಾಗರಹೊಳೆ ಅರಣ್ಯ ಪ್ರದೇಶದ ಡಿ.ಬಿ.ಕುಪ್ಪೆ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಇಂದು ಫೈರ್ ಲೈನ್ ಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ಸರ್ವೆ ನಡೆಸುತ್ತಿದ್ದರು. ಸ್ವತಃ ಸರ್ವೆ ನಡೆಸಲು ಸಿಎಫ್ ಮಣಿಕಂಠನ್ ಕಾಡಿನೊಳಗೆ ನುಗ್ಗಿದ್ದರು. ಈ ವೇಳೆ ಏಕಾಏಕಿ ಆನೆಯೊಂದು ಬಂದು ದಾಳಿ ನಡೆಸಿದೆ. ತಕ್ಷಣವೇ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮಣಿಕಂಠನ್ ಸಾವನ್ನಪ್ಪಿದ್ದಾರೆ.
Advertisement
ತಮಿಳುನಾಡು ಮೂಲದ 2001 ಎಎಫ್‍ಎಸ್ ಬ್ಯಾಚ್ ಅಧಿಕಾರಿಯಾಗಿದ್ದ ಮಣಿಕಂಠನ್ ಈ ಹಿಂದೆ ಹಲವು ಜಿಲ್ಲೆಗಳಲ್ಲಿ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಎರಡು ವರ್ಷಗಳಿಂದ ನಾಗರಹೊಳೆ ಹುಲಿ ಸಂರಕ್ಷಣಾ ಯೋಜನೆ ನಿರ್ದೇಶಕರಾಗಿದ್ದರು.
Advertisement
ಮಣಿಕಂಠನ್ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಪಾರ್ಥಿವ ಶರೀರ ತರಲಾಗಿದೆ.
Advertisement
Advertisement