ಬೆಂಗಳೂರು: ಹಿರಿಯ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಜಿಎನ್ ರಂಗನಾಥ್ ರಾವ್ (83) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಂಗನಾಥ್ ರಾವ್ (GN Ranganath Rao) ಇಂದು ತಮ್ಮ ಪುತ್ರ ಮತ್ತು ಮಗಳನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.
Advertisement
Advertisement
1942ರಲ್ಲಿ ಬೆಂಗಳೂರು ಜಿಲ್ಲೆಯ ಹಾರೋಹಳ್ಳಿಯಲ್ಲಿ ಹುಟ್ಟಿದ ಜಿಎನ್ ರಂಗನಾಥ್ ಅವರು ಹೊಸಕೋಟೆ ಹಾಗೂ ಬೆಂಗಳೂರು ನಗರದಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. 1962 ರಲ್ಲಿ ಸಂಯುಕ್ತ ಕರ್ನಾಟಕ ಬೆಂಗಳೂರು ಆವೃತ್ತಿಯಲ್ಲಿ ಉಪಸಂಪಾದಕರಾಗಿ ಪತ್ರಿಕೋದ್ಯಮದಲ್ಲಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. ನಂತರ ಅವರು ಪ್ರಜಾವಾಣಿಗೆ ಸೇರಿಕೊಂಡು ಕಾರ್ಯನಿರ್ವಾಹಕ ಸಂಪಾದಕರಾಗಿ ನಿವೃತ್ತರಾದರು. ಇದನ್ನೂ ಓದಿ: ಯಾವುದಕ್ಕೂ ಡಿಸ್ಟರ್ಬ್ ಆಗಲ್ಲ, ಮ್ಯಾನಿಪುಲೇಟ್ ಮಾಡಲ್ಲ- ಪಬ್ಲಿಕ್ ಟಿವಿಗೆ ಸಿಎಂ EXCLUSIVE ಸಂದರ್ಶನ
Advertisement
ಬಹುಮುಖ ವ್ಯಕ್ತಿತ್ವ ಹೊಂದಿದ್ದ ಅವರು ‘ನವರಂಗ’ ಎಂಬ ಕಾವ್ಯನಾಮದಲ್ಲಿ ಕಾದಂಬರಿಗಳು, ಸಣ್ಣ ಕಥೆಗಳು, ನಾಟಕಗಳು, ವಿಮರ್ಶಾತ್ಮಕ ಪ್ರಬಂಧಗಳನ್ನು ಬರೆದಿದ್ದಾರೆ. ಕವಿಯಾಗಿ ಅವರು ಉದಯೋನ್ಮುಖ ಕವಿಗಳಿಗೆ ಪ್ರೋತ್ಸಾಹ ನೀಡಿದ್ದಾರೆ. ಅವರು ಮಾಧ್ಯಮಕ್ಕೆ ನೀಡಿದ ಕೊಡುಗೆಗಳನ್ನು ಪರಿಗಣಿಸಿ 2018ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದನ್ನೂ ಓದಿ: ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ – ನ.7 ಕ್ಕೆ ಮೊದಲ, ನ.30 ರಂದು ಕೊನೆ ಚುನಾವಣೆ
Advertisement
Web Stories