ಕಲಬುರಗಿ | ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು

Public TV
1 Min Read
GLB JUDGE DEATH AV

ಕಲಬುರಗಿ: ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗು ಮುನ್ನ ಹೃದಯಾಘಾತದಿಂದ (Heart Attack) ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ (Kalaburagi) ಜಿಲ್ಲಾ ನ್ಯಾಯಲಯದಲ್ಲಿ ನಡೆದಿದೆ.

ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ. ಇದನ್ನೂ ಓದಿ: ಇರಾನ್ ಹಾರ್ಮುಝ್ ಜಲಸಂಧಿ ಬಂದ್ ಮಾಡಿದ್ರೆ ಭಾರತಕ್ಕೆ ಭಾರೀ ನಷ್ಟ: ಹಿರಿಯ ಪ್ರಾಧ್ಯಾಪಕ ಎಸ್.ಆರ್ ಕೇಶವ್

Heart Disease

ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ಕೋರ್ಟ್‌ಗೆ ಬಂದಿದ್ದರು. ಆದ್ರೆ ಕೋರ್ಟ್ ಹಾಲ್‌ಗೆ ಬರುವುದಕ್ಕಿಂತ ಮುಂಚೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಲಾಗಿದೆ. ಆದರೆ ಆಸ್ಪತ್ರೆ ಕರೆತರುವ ಮುನ್ನವೇ ನ್ಯಾಯಧೀಶರು ಕೊನೆ ಉಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್‌ನ ತೈಲ ಸಂಗ್ರಹ, ಅನಿಲ ಉತ್ಪಾದನಾ ಘಟಕಗಳೇ ಇಸ್ರೇಲ್‌ಗೆ ಟಾರ್ಗೆಟ್

Share This Article