ಚುನಾವಣಾ ರಾಜಕಾರಣಕ್ಕೆ ಈಶ್ವರಪ್ಪ ಗುಡ್‍ಬೈ

Public TV
1 Min Read
ks eshwarappa 2

ಬೆಂಗಳೂರು: ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ದಿನಬೆಳಗಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಇದೀಗ ಬಿಜೆಪಿಯಿಂದ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆಯಾಗುವ ಹೊತ್ತಲ್ಲೇ ಮತ್ತೊಂದು ಬೆಳವಣಿಗೆ ನಡೆದಿದೆ.

ಹೌದು. ರಾಜ್ಯ ರಾಜಕೀಯದಿಂದ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ಹಿಂದೆ ಸರಿದಿದ್ದಾರೆ. ಈ ಸಂಬಂಧ ನಡ್ಡಾಗೆ ಪತ್ರ ಬರೆದಿರುವ ಈಶ್ವರಪ್ಪ, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.

KS ESHWARAPPA

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರಿಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಈಶ್ವರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಪಕ್ಷೇತರನಿಗೆ ಬಿದ್ದ ಅನಿರೀಕ್ಷಿತ ಮತ ಸಿದ್ದು ಪಾಲಿಗೆ ವರವಾಯ್ತು!

ಒಟ್ಟಿನಲ್ಲಿ ಬಿಜೆಪಿ ಲಿಸ್ಟ್ ಬಿಡುಗಡೆ ಮುನ್ನವೇ ಈಶ್ವರಪ್ಪ ನಡೆ ಭಾರೀ ಕುತೂಹಲ ಮೂಡಿಸಿದೆ. ಇದಕ್ಕೂ ಮುನ್ನವೇ ಹಾಲಾಡಿ ಶ್ರೀನಿವಾಸ ಶೆಟ್ಟಿ, ದಾವಣಗೆರೆ ಬಿಜೆಪಿ ಶಾಸಕ ಎಸ್.ಎ ರವೀಂದ್ರನಾಥ್ ರಾಜ್ಯ ರಾಜಕೀಯದಿಂದ ದೂರ ಸರಿದಿದ್ದು ಇದೀಗ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ಗುಡ್‍ಬೈ ಹೇಳಿದ್ದಾರೆ.

Share This Article