Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ: ಛಲವಾದಿ ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ: ಛಲವಾದಿ ನಾರಾಯಣಸ್ವಾಮಿ

Bengaluru City

ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ: ಛಲವಾದಿ ನಾರಾಯಣಸ್ವಾಮಿ

Public TV
Last updated: February 18, 2025 8:34 pm
Public TV
Share
2 Min Read
chalavadi narayanaswamy 1
SHARE

– ಅಭಿವೃದ್ಧಿಶೂನ್ಯತೆ, ಒಳಜಗಳ, ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿರುವ ಸರ್ಕಾರ ಎಂದು ಟೀಕೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಶೂನ್ಯತೆ ಮತ್ತು ಒಳಜಗಳ-ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರ ಈ ಒಳ್ಳೆಯ ಕೆಲಸ ಮಾಡಿದೆ ಎಂದು ಮಾತನಾಡಬೇಕಿತ್ತು. ಪರಿಸ್ಥಿತಿ ಬದಲಾಗಿದೆ. ರಾಜ್ಯದ ಅನುಭವಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ. ಸರ್ಕಾರ ಗ್ಯಾರಂಟಿ ಹಣ ಕೊಟ್ಟಿಲ್ಲ, ಅಕ್ಕಿ ಸಿಕ್ಕಿಲ್ಲ. 2 ಸಾವಿರ ರೂ. ಆರು ತಿಂಗಳಿನಿಂದ ಬಂದಿಲ್ಲ. ಆರು ತಿಂಗಳಿನಿಂದ ವಂಚನೆ ಆಗಿದೆ ಎಂದು ಮಾತನಾಡುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.

ಅಧಿಕಾರಕ್ಕಾಗಿ, ಮುಖ್ಯಮಂತ್ರಿ ಯಾರಾಗಬೇಕೆಂಬ ಕಚ್ಚಾಟ, ಕಿತ್ತಾಟ ಮುಂದುವರೆದಿದೆ. ಅದರಲ್ಲೂ ಇನ್ನೊಂದು ರೀತಿಯ ಪ್ರಚಾರದಲ್ಲಿ ಈ ಸರ್ಕಾರ ಇದೆ ಎಂದು ಅವರು ಆಕ್ಷೇಪಿಸಿದರು. ಬೆಟ್ಟಿಂಗ್ ದಂಧೆಯಲ್ಲಿ ಇವತ್ತು 3 ಜನರ ಪ್ರಾಣತ್ಯಾಗ ಆಗಿದೆ. ಆನ್‍ಲೈನ್ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿ ರಾಜ್ಯದಲ್ಲಿ ನಡೆಯುತ್ತಿದೆ. ಇದರ ಕಡೆ ಗಮನ ಹರಿಸಲು ಸರ್ಕಾರಕ್ಕೆ ಸಮಯವೇ ಇಲ್ಲ. ಸರ್ಕಾರ ನಡೆಸುವವರೇ ಈ ದಂಧೆಯಲ್ಲಿ ಪಾಲುದಾರರು ಎಂದು ಬಹಳ ಜನರು ಮಾತನಾಡುತ್ತಿದ್ದಾರೆ ಎಂದು ಛಲವಾದಿ ತಿಳಿಸಿದರು.

ಸಮಗ್ರ ತನಿಖೆ ನಡೆಸಲು ಆಗ್ರಹ
ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನಲ್ಲಿ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಮಕ್ಕಳು ಅಸುನೀಗಿದ್ದಾರೆ. ಅದು ಕೊಲೆ ಎಂದು ಆಪಾದನೆಗಳಿವೆ. ನಾನು ಎಸ್ಪಿಯವರಿಗೂ ಮಾತನಾಡಿದ್ದೇನೆ. ಇದರ ಸಮಗ್ರ ತನಿಖೆ ನಡೆಸಬೇಕಿದೆ ಎಂದು ಆಗ್ರಹಿಸಿದರು. ಈ ಸರ್ಕಾರವು ಜನರ ಪ್ರಾಣ, ಮಾನದ ವಿಚಾರದಲ್ಲಿ ಒಂದು ರೀತಿಯ ಆಟ ಆಡುತ್ತಿದೆ ಎಂದು ಟೀಕಿಸಿದರು.

ಪಾರ್ಕಿನ ಜಾಗ ಬೇರೆ ಉದ್ದೇಶಕ್ಕೆ ಕೊಡದಿರಿ
ಗುಲ್ಬರ್ಗದಲ್ಲಿ ಪಾರ್ಕಿಗಾಗಿ ಇಟ್ಟಿದ್ದ ಜಾಗವನ್ನು ಸಿದ್ಧಾರ್ಥ ವಿಹಾರ ಟ್ರಸ್ಟ್ ಪರಿವರ್ತನೆ ಮಾಡಿ ಕೊಡಿ ಎಂದು ಕೇಳಿದ ವಿಷಯವನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ಕಾನೂನಿನಡಿ ಆ ರೀತಿ ಮಾಡಲು ಆಗುವುದಿಲ್ಲ. ಅದು ಆಟದ ಮೈದಾನ, ಪಾರ್ಕ್‍ಗೆ ಇಟ್ಟಿದ್ದರೆ ಅದನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತಿಸಲು ಅಸಾಧ್ಯ ಎಂದು ನುಡಿದರು. ಅದನ್ನು ಪರಿವರ್ತಿಸಬಾರದು ಎಂಬ ಅಭಿಪ್ರಾಯ ತಮ್ಮದೂ ಕೂಡ ಆಗಿದೆ ಎಂದು ಪ್ರಶ್ನೆಗೆ ಛಲವಾದಿ ನಾರಾಯಣಸ್ವಾಮಿ ಉತ್ತರ ಕೊಟ್ಟರು.

TAGGED:bengalurubjpchalavadi narayanaswamycongresssiddaramaiahಛಲವಾದಿ ನಾರಾಯಣಸ್ವಾಮಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
18 minutes ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
26 minutes ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
35 minutes ago
Chikkamagaluru Funeral
Chikkamagaluru

ಪುರುಷ ಪ್ರಧಾನ ಸಮಾಜಕ್ಕೆ ತಿಲಾಂಜಲಿ – ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
42 minutes ago
GBA
Bengaluru City

ಸಿಲಿಂಡರ್ ಕೊರತೆ – ಬಯೋಗ್ಯಾಸ್ ಉತ್ಪಾದನೆಗೆ ಮುಂದಾದ ಜಿಬಿಎ

Public TV
By Public TV
1 hour ago
bank loan
Districts

9 ರೂ. ಸಾಲಕ್ಕೆ ಬೆನ್ನು ಬಿದ್ದ ಬ್ಯಾಂಕ್‌ – ಸಾಲ ತೀರಿಸಿ ಕೊನೆಗೂ ತನ್ನ ಖಾತೆಗೆ ಬಾಕಿ 66 ಪೈಸೆ ಹಾಕಿಸಿಕೊಂಡ ರೈತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?