ಕನ್ನಡ ಚಿತ್ರರಂಗದ ಮಹಾನ್ ನಟಿ ಲೀಲಾವತಿ (Leelavathi) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಾಗಿ ಹಾಸಿಗೆ ಹಿಡಿದಿರುವ ನಟಿ ಲೀಲಾವತಿ ಅವರ ಯೋಗಕ್ಷೇಮ ವಿಚಾರಿಸಲು ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಭೇಟಿ ನೀಡಿದ್ದಾರೆ.
Advertisement
ಕನ್ನಡ ಮಾತ್ರವಲ್ಲದೇ ಬಹುಭಾಷೆಗಳಲ್ಲಿ ಛಾಪೂ ಮೂಡಿಸಿರುವ ನಟಿ ಲೀಲಾವತಿ ಇದೀಗ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ನಿವಾಸಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ (Bama harish) ಭೇಟಿ ನೀಡಿ, ಯೋಗಕ್ಷೇಮ ವಿಚಾರಿಸಿದ್ದಾರೆ. ಇದನ್ನೂ ಓದಿ:ಸೋಮಣ್ಣ – ಗುರೂಜಿ ಗೆಲುವು ನೋಡಿ, ಗಳಗಳನೆ ಅತ್ತ ಸಾನ್ಯ ಅಯ್ಯರ್
Advertisement
Advertisement
ಇನ್ನು ನೆಲಮಂಗಲದ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆಯನ್ನ ಲೀಲಾವತಿ ಪಡೆದುಕೊಳ್ಳುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಲೀಲಾವತಿ ಅವರ ಪುತ್ರ ವಿನೋದ್ ರಾಜ್ಕುಮಾರ್ (Vinod rajkumar) ಅವರ ಬಳಿ ನಟಿಯ ಆರೋಗ್ಯದ ಕುರಿತು ವಿಚಾರಿಸಿದ್ದಾರೆ.