Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

Cinema

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

Public TV
Last updated: February 6, 2022 9:57 am
Public TV
Share
4 Min Read
LATHA MANGESHKAR
SHARE

ಮುಂಬೈ: ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಕೊನೆಯುಸಿರೆಳದಿದ್ದಾರೆ. ಮುಂಬೈನ ಕ್ಯಾಂಡಿ ಆಸ್ಪತ್ರೆಯ ತ್ರೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲ ಅಗಲಿದ್ದಾರೆ.

ಸೋಂಕಿನ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು.

LATHA 1

ಲತಾ ಮಂಗೇಶ್ಕರ್ (ಸೆಪ್ಟೆಂಬರ್ 28, 1929) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. 1967ರಲ್ಲಿ ಬಿಡುಗಡೆಯಾದ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಕನ್ನಡ ಚಲನಚಿತ್ರದಲ್ಲಿನ “ಬೆಳ್ಳನೆ ಬೆಳಗಾಯಿತು” ಮತ್ತು “ಎಲ್ಲಾರೆ ಇರತೀರೋ ಎಂದಾರೆ ಬರತೀರೋ” ಹಾಡುಗಳನ್ನು ಹಾಡಿದ್ದಾರೆ.

ಬಾಲ್ಯ: ಶಾಸ್ತ್ರೀಯ-ಸಂಗೀತಕಾರ ಮತ್ತು ರಂಗ-ನಟ ಪಂಡಿತ್ ದೀನಾನಾಥ್ ಮಂಗೇಶ್ಕರ್ ಅವರ ಪುತ್ರಿ, ಲತಾ ಮಧ್ಯಪ್ರದೇಶದ ಇಂದೋರಿನಲ್ಲಿ ಜನಿಸಿದರು. ತಾಯಿಯನ್ನು ‘ಮಾಯಿ,’ ಎಂದೇ ಎಲ್ಲರೂ ಕರೆಯುತ್ತಿದ್ದರು. ತಾಯಿಯ ತವರಿನ ಹೆಸರು ಸೇವಂತಾ. ದೀನಾನಾಥರದು ಎರಡನೆಯ ಮದುವೆ. ಮೊದಲ ಮದುವೆ, ನರ್ಮದಾ ಜೊತೆ. ಆಕೆಯ ಮರಣದ ನಂತರ ತಂಗಿ ಶೇವಂತಾರ ಜೊತೆಗೆ ಮದುವೆಯಾಯಿತು. ಈಕೆಯ ಹೆಸರನ್ನು ‘ಶುದ್ಧಮತಿ’ ಎಂದು ಹೆಸರಿಟ್ಟರು.

LATHA mangeshkar

ಬಲವಂತ್ ಸಂಗೀತ್ ಮಂಡಳಿ ಎಂಬ ಸಂಸ್ಥೆಯನ್ನು ದೀನಾನಾಥ್ ಅವರು ನಡೆಸುತ್ತಿದ್ದರು. ದೀನಾನಾಥ್ ಒಳ್ಳೆಯ ನಟ, ಗಾಯಕ, ಕೃತಿಶೀಲ ಸಮಾಜಸೇವಕ. ಕೆಲವು ಕಾರಣಗಳಿಂದ ಕಂಪೆನಿ ಮುಚ್ಚಿತು. ದಂಪತಿಗಳಿಗೆ ಲತಾ, ಆಶಾ, ಮೀನಾ, ಉಷಾ ಎಂಬ ನಾಲ್ಕು ಹೆಣ್ಣು ಮಕ್ಕಳಲ್ಲದೆ ಹೃದಯನಾಥ್ ಎಂಬ ಗಂಡುಮಗ. ದೀನಾನಾಥ್ ಮನೆಯಲ್ಲಿ ಕೆಲವು ಮಕ್ಕಳಿಗೆ ಸಂಗೀತ ಪಾಠ ಹೇಳುತ್ತಿದ್ದರು. ಒಂದು ದಿನ ಒಬ್ಬ ಹುಡುಗ ಸಂಗೀತಾಭ್ಯಾಸ ಮಾಡುವಾಗ ತಪ್ಪುತ್ತಿದ್ದುದನ್ನು ಎಳೆಯ ವಯಸ್ಸಿನ ಲತಾ ತಿದ್ದುವುದನ್ನು ಗಮನಿಸಿದ ದೀನಾನಾಥ್ ಮಗಳಲ್ಲಿ ಸಂಗೀತದ ಪ್ರತಿಭೆ ಇರುವುದನ್ನು ಮನಗಂಡರು. ಮರುದಿನದಿಂದಲೇ ಅವರು ಮಗಳಿಗೆ ಮನೆಯಲ್ಲಿ ಸಂಗೀತಪಾಠ ಪ್ರಾರಂಭಿಸಿದರು.

LATHA

ಲತಾ ಅವರ ಮೊದಲ ಹೆಸರು “ಹೇಮಾ” ಎಂದು. ಹೇಮಾಳ ಬಹುಮುಖಪ್ರತಿಭೆಯನ್ನು ತಂದೆ ಗುರುತಿಸಿ, ಒಮ್ಮೊಮ್ಮೆ ‘ಹೃದಯಾ’, ‘ಟಾಟಾಬಾಬಾ,’ ಎನ್ನುತ್ತಿದ್ದರು. “ಭಾವ್ ಬಂಧನ್” ನಾಟಕದಲ್ಲಿ ಮಾಡಿದ ಅಭಿನಯನದ ನಂತರ ಅವರ ಹೆಸರು ಲತಾ ಎಂದಾಯಿತು. ಲತಾಗೆ ಔಪಚಾರಿಕ ಶಿಕ್ಷಣವೇನೂ ದೊರೆಯಲಿಲ್ಲ. ಒಂದು ದಿನ ಶಾಲೆಗೆ ಹೋಗಿದ್ದರು. ಮರುದಿನ ತಮ್ಮ ತಂಗಿ ಆಶಾಳ ಜೊತೆ ಶಾಲೆಗೆ ಹೋದಾಗ ಶಿಕ್ಷಕರು ಗದರಿದರಂತೆ. ಸರಿ. ಲತಾ ಮುಂದೆ ಎಂದೂ ಶಾಲೆಯ ಮೆಟ್ಟಿಲು ಹತ್ತುವುದಿಲ್ಲವೆಂದು ಪಣತೊಟ್ಟರು. ಸಣ್ಣ-ಪುಟ್ಟ ನಾಟಕಗಳಲ್ಲಿ ಕಾಣಿಸಿಕೊಂಡರು. ತಾವು ತುಂಬಾ ತುಂಟತನ ಮಾಡುತ್ತಿದ್ದೆ ಎಂದು ಲತಾ ನೆನಪಿಸಿಕೊಂಡಿದ್ದಾರೆ. ಒಮ್ಮೆ ಮನೆಯವರು ಏನನ್ನೋ ತರಲು ಕಿರಾಣಿ ಅಂಗಡಿಗೆ ಕಳಿಸಿದರು. ಲತಾ ಹತ್ತಿರ ಒಂದು ಸವಕಲು ನಾಣ್ಯ ಇತ್ತು. ಅದನ್ನು ಅಂಗಡಿಗೆ ತೆಗೆದುಕೊಂಡು ಹೋಗಿ ಅಂಗಡಿಯವನಿಗೆ “ಇಗೋ ನಿನ್ನ ದುಡ್ಡಿನ ಪೆಟ್ಟಿಗೆಯಲ್ಲಿ ನಾಣ್ಯ ಹಾಕುತ್ತಿದ್ದೇನೆ, ನನಗೆ ಪದಾರ್ಥ ಕೊಡು,” ಎಂದು ಅಂಗಡಿಯವನಿಗೆ ಟೋಪಿ ಹಾಕಿದರಂತೆ. ಮನೆಗೆ ಬಂದು ತಮ್ಮ ಕೆಲಸವನ್ನು ಹೆಮ್ಮೆಯಿಂದ ಹೇಳಿಕೊಂಡಾಗ ತಂದೆಯಿಂದ ಚೆನ್ನಾಗಿ ಬೈಸಿಕೊಂಡು ಮತ್ತೆ ಅಂಗಡಿಗೆ ಹೋಗಿ ಕ್ಷಮಾಪಣೆ ಕೇಳಬೇಕಾಯಿತಂತೆ.

latha 1

ಸಂಗೀತ ಜೀವನ: ಲತಾ ಅವರು ಬಹುಶಃ ಹಿಂದಿಯ ಪ್ರತಿಯೊಬ್ಬ ಸಂಗೀತ ನಿರ್ದೇಶಕರ ಜೊತೆ ಕೆಲಸ ಮಾಡಿದ್ದಾರೆ. ಹಿಂದಿ ಚಿತ್ರರಂಗದ ಬಹುತೇಕ ನಟಿಯಾರಿಗಾಗಿ ಲತಾ ಹಾಡಿದ್ದಾರೆ. ಐವತ್ತರ ದಶಕದಲ್ಲಿ ಮೇಲೇರಿದ ಅವರ ಕೀರ್ತಿ ಪತಾಕೆ ಕೆಳಕ್ಕೆ ಇಳಿಯಲೇ ಇಲ್ಲ. ಗಜಲ್, ಪ್ರೇಮಗೀತೆ, ಭಜನೆ, ಜನಪದ ಗೀತೆ, ಯುಗಳಗೀತೆ, ಕ್ಲಬ್ ಸಾಂಗ್ ಹೀಗೆ ಪ್ರತಿಯೊಂದೂ ಬಗೆಯ ಹಾಡುಗಳನ್ನು ಲತಾ ಹಾಡಿದ್ದಾರೆ. ಹಿಂದಿಯಲ್ಲದೆ ಭಾರತದ ಪ್ರತಿಯೊಂದು ಭಾಷೆಯಲ್ಲೂ ಅವರು ಹಾಡಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರನ್ನು “ಲತಾ ದೀದಿ” ಎಂದೇ ಕರೆಯುತ್ತಾರೆ. ಲತಾ ಅವರು ವಿವಾಹವಾಗಲಿಲ್ಲ. ತಮ್ಮ ಜೀವನವನ್ನು ಸಂಗೀತಕ್ಕೇ ಮುಡಿಪಾಗಿಟ್ಟರು. ಲತಾ ಅವರ ಕುಟುಂಬದಲ್ಲಿ ಪ್ರತಿಯೊಬ್ಬರೂ ಸಂಗೀತ ಕ್ಷೇತ್ರದಲ್ಲಿರುವುದು ಒಂದು ವಿಶೇಷ. ಆಶಾ ಮತ್ತು ಲತಾ, ಉಷಾ ಮತ್ತು ಲತಾ, ಮೀನಾ ಮತ್ತು ಲತಾ ಹಾಡಿರುವ ಕೆಲವು ಯುಗಳಗೀತೆಗಳೂ ಪ್ರಸಿದ್ಧವಾಗಿವೆ. ತಮ್ಮ ಹೃದಯನಾಥ್ ಮಂಗೇಷ್ಕರ್ ಸಂಗೀತ ನಿರ್ದೇಶನದಲ್ಲಿ ಲತಾ ಅನೇಕ ಗೀತೆಗಳನ್ನು ಹಾಡಿದ್ದಾರೆ. ಉದಾ. ಮೀರಾ ಭಜನೆಗಳು. ಲತಾ ಅವರು “ಲೇಕಿನ್” ಎಂಬ ಕಲಾತ್ಮಕ ಚಿತ್ರವನ್ನು ನಿರ್ಮಿಸಿದರು.

latha 2

ಚೀನಾ-ಭಾರತ ಯುದ್ಧದಲ್ಲಿ ಭಾರತದ ಅನೇಕ ಸೈನಿಕರು ತಮ್ಮ ಪ್ರಾಣ ತೆತ್ತರು. ಇವರ ನೆನಪಿನಲ್ಲಿ ಒಂದು ವಿಶೇಷಗೀತೆಯನ್ನು ಪ್ರದೀಪ್ ಎಂಬ ಕವಿ ರಚಿಸಿದರು. ಈ ಗೀತೆಯನ್ನು ಸಿ. ರಾಮಚಂದ್ರ ಅವರ ಸಂಗೀತ ನಿರ್ದೇಶನದಲ್ಲಿ ಲತಾ ಅವರು 1963 ಜನವರಿ 27ರಂದು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಹಾಡಿದರು. “ಐ ಮೇರೆ ವತನ್ ಕೇ ಲೋಗೋಂ, ಜರಾ ಆಂಖ್ ಮೇ ಭರಲೋ ಪಾನಿ ” ಎಂದು ಪ್ರಾರಂಭವಾಗುವ ಗೀತೆಯನ್ನು ಕೇಳಿ ಅಂದಿನ ಪ್ರಧಾನಮಂತ್ರಿ ಜವಾಹರಲಾಲ್ ನೆಹರೂ ಅವರ ಕಣ್ಣಿನಲ್ಲಿ ನೀರಾಡಿತು. ಅವರು ಲತಾ ಮಂಗೇಶ್ಕರ್ ಅವರೊಂದಿಗೆ ಕಾರ್ಯಕ್ರಮದ ನಂತರ ಮಾತಾಡಿ “ನೀನು ನನ್ನನ್ನು ಅಳಿಸಿಬಿಟ್ಟೆ,” ಎಂದು ಭಾವುಕರಾಗಿ ಹೇಳಿದರಂತೆ. ಈ ಹಾಡನ್ನು ನವದೆಹಲಿಯಲ್ಲಿ ಪ್ರತಿ ಜನವರಿ 26ರ ಸಮಾರಂಭದಲ್ಲಿ ಕೇಳಬಹುದು.

latha 4

10,000ಕ್ಕೂ ಹೆಚ್ಚು ಹಾಡುಗಳನ್ನು 22 ಭಾಷೆಗಳಲ್ಲಿ ಹಾಡಿದ್ದಾರೆ. ಅಮೆರಿಕ, ಯೂರೊಪ್ ಸುತ್ತಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಆಕೆಯ ಹಾಡುಗಳ ವಿಶೇಷವೆಂದರೆ, ಅಸಾಧಾರಣ ಸ್ಪಷ್ಟ ಶಬ್ದೋಚ್ಚಾರ, ಶಾಸ್ತ್ರೀಯ ಸಂಗೀತದ ಸ್ವರಬದ್ಧ ಸಂಸ್ಕಾರ, ಗೀತೆಗಳ ಗುಣಮಟ್ಟ, ಸನ್ನಿವೇಶಕ್ಕೆ ನಟಿಯರ ಕಂಠಕ್ಕೆ ಸರಿಯಾಗಿ ಅಳವಡಿಸಿಹಾಡುವ ಕಲೆ ಇವರಗಿತ್ತು.

 

TAGGED:Lata MangeshkarsandalwoodSenior singerಆಸ್ಪತ್ರೆಕೊರೊನಾಮುಂಬೈಲತಾ ಮಂಗೇಶ್ಕರ್
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

David Warner
Cricket

ಡ್ರಿಂಕ್ & ಡ್ರೈವ್‌ ಕೇಸಲ್ಲಿ ಕ್ರಿಕೆಟಿಗ ಡೇವಿಡ್ ವಾರ್ನರ್ ಬಂಧನ

Public TV
By Public TV
1 minute ago
US has struck Iranian military targets on Kharg Island
Latest

48 ಗಂಟೆಗಳ ಡೆಡ್‌ಲೈನ್‌ ಮುಗಿಯುವ ಮೊದಲೇ ಇರಾನ್‌ ಮೇಲೆ ಅಮೆರಿಕ, ಇಸ್ರೇಲ್‌ ಭಯಾನಕ ದಾಳಿ

Public TV
By Public TV
3 minutes ago
Air India Flight
Latest

ಮತ್ತಷ್ಟು ಏರಿಕೆಯಾಗಲಿದೆ ಏರ್ ಇಂಡಿಯಾ ಪ್ರಯಾಣ ದರ

Public TV
By Public TV
39 minutes ago
Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
1 hour ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
1 hour ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?