ಬೆಂಗಳೂರು: ಗಿರೀಶ್ ಕಾರ್ನಾಡ್ ಅವರು ಬ್ರಿಲಿಯಂಟ್ ವಿದ್ಯಾರ್ಥಿಯಾಗಿದ್ದರು ಎಂದು ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರು ನೆನಪನ್ನು ಹಂಚಿಕೊಂಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬಹಳ ಒಳ್ಳೆಯ ಮನುಷ್ಯ ಅವರಾಗಿದ್ದರು. ಕನ್ನಡಕ್ಕೆ ಅಂತರಾಷ್ಟ್ರೀಯ ಮಾನ್ಯತೆಯನ್ನು ತಂದುಕೊಟ್ಟ ಕೆಲವೇ ಕೆಲವು ವ್ಯಕ್ತಿಗಳ ಪೈಕಿ ಗಿರೀಶ್ ಕಾರ್ನಾಡ್ ಒಬ್ಬರು ಎಂದು ತಿಳಿಸಿದರು. ಇದನ್ನೂ ಓದಿ: ಗಿರೀಶ್ ಅವರನ್ನು ನೋಡ್ತಿದ್ದರೆ ವಿವೇಕಾನಂದ ನೆನಪಾಗ್ತಿದ್ರು: ಬಿ.ಟಿ ಲಲಿತಾ ನಾಯಕ್
ಧಾರವಾಡದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಓದಿದ ಅವರು ಬ್ರಿಲಿಯಂಟ್ ವಿದ್ಯಾರ್ಥಿಯಾಗಿದ್ದರು. ನವ್ಯ ಬರಹಗಾರ, ನಾಟಕಕಾರ, ಸಿನಿಮಾ ಸಾಮಾಜಿಕ ಪ್ರಜ್ಞೆಯನ್ನು ಹೊಂದಿದ ವ್ಯಕ್ತಿಯಾಗಿದ್ದರು ಎಂದು ಚಂಪಾ ನೆನಪನ್ನು ಹಂಚಿಕೊಂಡರು.
ಕಳೆದ ವರ್ಷ ಗೌರಿ ಲಂಕೇಶ್ ಕುರಿತು ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊನೆಯ ಬಾರಿ ಕಾರ್ನಾಡ್ ಜೊತೆ ಮಾತನಾಡಿದ್ದೆ ಎಂದು ತಿಳಿಸಿದರು.
https://www.youtube.com/watch?v=rjR2qIhqevM