ಬೆಂಗಳೂರು: ಒಂಟಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೊಮ್ಮನಹಳ್ಳಿ (Bommanahalli) ಪೊಲೀಸ್ ಠಾಣೆ ವ್ಯಾಪ್ತಿಯ ಹೊಂಗಸಂದ್ರದ ಮುನಿಯಪ್ಪ ಲೇಔಟ್‌ನಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಕೃಷ್ಣ ಬರ್ಮನ್ (40) ಕೊಲೆಯಾದ ಮಹಿಳೆ. ಇದನ್ನೂ ಓದಿ: ಮದ್ವೆಗೆ ಒಪ್ಪದೇ ಅವಾಯ್ಡ್ ಮಾಡ್ತಿದ್ದ ಪ್ರೇಯಸಿ – ಊಟಕ್ಕೆ ಕರೆದು ಕತ್ತುಕೊಯ್ದು ಕೊಂದ ಪ್ರಿಯಕರ
ಮೃತ ಮಹಿಳೆ ಮುನಿಯಪ್ಪ ಲೇಔಟ್‌ನಲ್ಲಿ ಸಣ್ಣ ರೂಮ್ ಮಾಡಿಕೊಂಡಿದ್ದು, ಅಡುಗೆ ಕೆಲಸ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಪರಿಚಯಸ್ಥರೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
