ಮುಂಬೈ: ಭಾರತೀಯ ಷೇರು ಮಾರುಕಟ್ಟೆಯಲ್ಲಿ (Indian Stock Markets) ಆರಂಭಿಕ ಭಾರೀ ಕುಸಿತ ಕಂಡಿದೆ. ಸೆನ್ಸೆಕ್ಸ್ 1,600 ಪಾಯಿಂಟ್ ಹಾಗೂ ನಿಫ್ಟಿ 500 ಪಾಯಿಂಟ್ ಕುಸಿತ ಕಂಡಿದೆ.
ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 286 ಸ್ಥಾನಗಳ ಮುನ್ನಡೆ ಕಾಯ್ದುಕೊಂಡಿದೆ. ಇಂಡಿಯಾ ಮೈತ್ರಿಕೂಟ 223 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದನ್ನೂ ಓದಿ: ಅಂಚೆ ಮತದಾನದಲ್ಲಿ ಎನ್‌ಡಿಎ 304, ಇಂಡಿಯಾ ಕೂಟ 167, ಇತರೆ 30 ಕ್ಷೇತ್ರಗಳಲ್ಲಿ ಮುನ್ನಡೆ
ಎನ್‌ಎಸ್‌ಇ ನಿಫ್ಟಿ 50 ಸೂಚ್ಯಂಕವು ಬೆಳಿಗ್ಗೆ 9:15 ರ ಹೊತ್ತಿಗೆ 2.2% ರಷ್ಟು ಕುಸಿದು 22,779 ಕ್ಕೆ ತಲುಪಿದೆ. ಬಿಎಸ್‌ಇ ಸೆನ್ಸೆಕ್ಸ್ ಶೇ.1.8 ರಷ್ಟು ಕುಸಿದು (75,163) ಕ್ಕೆ ತಲುಪಿದೆ.
ಸೋಮವಾರದಂದು ಬೆಂಚ್‌ಮಾರ್ಕ್‌ಗಳು 3% ಕ್ಕಿಂತ ಹೆಚ್ಚು ಜಿಗಿದಿತ್ತು. ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು. ಬಿಜೆಪಿ ನೇತೃತ್ವದ ಮೈತ್ರಿಕೂಟವು ಮೂರನೇ ಎರಡರಷ್ಟು ಬಹುಮತ ಪಡೆಯಲಿದೆ ಎಂದು ಅಂದು ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿದ್ದವು. ಇದನ್ನೂ ಓದಿ: NDA vs I.N.D.I.A ನೆಕ್ ಟು ನೆಕ್ ಫೈಟ್ – ಎನ್‌ಡಿಎ 295 ಕ್ಷೇತ್ರಗಳಲ್ಲಿ ಮುನ್ನಡೆ
ಸನ್ ಫಾರ್ಮಾ ಮತ್ತು ನೆಸ್ಲೆ ಮಾತ್ರ ಲಾಭ ಗಳಿಸಿವೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಸೋಮವಾರ 6,850.76 ಕೋಟಿ ರೂ. ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ ಎನ್ನಲಾಗಿದೆ. ಏಷ್ಯಾದ ಮಾರುಕಟ್ಟೆಗಳಲ್ಲಿ ಸಿಯೋಲ್, ಟೋಕಿಯೊ ಮತ್ತು ಶಾಂಘೈ ಕಡಿಮೆ ವಹಿವಾಟು ನಡೆಸುತ್ತಿದ್ದರೆ, ಹಾಂಗ್ ಕಾಂಗ್ ಲಾಭದೊಂದಿಗೆ ವಹಿವಾಟು ನಡೆಸಿತು.