ಬೆಂಗಳೂರು: ಪ್ರೊ.ಸುಖದೇವ್ ಥೋರಟ್ ನೇತೃತ್ವದಲ್ಲಿ ರಚನೆ ಆಗಿರುವ ರಾಜ್ಯ ಶಿಕ್ಷಣ ನೀತಿಯ ಅಂತಿಮ ವರದಿಯನ್ನು 2-3 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಸಲ್ಲಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ (Dr.Sudhakar) ತಿಳಿಸಿದರು.ಇದನ್ನೂ ಓದಿ: ಕೊಪ್ಪಳದ ಗವಿಸಿದ್ದಪ್ಪ ಕೊಲೆ ಕೇಸನ್ನ NIAಗೆ ವಹಿಸಿ – ಛಲವಾದಿ ನಾರಾಯಣಸ್ವಾಮಿ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿಯ (SEP) ವರದಿ ಸಿದ್ಧವಾಗಿದೆ. ಇವತ್ತು ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಎಸ್‌ಇಪಿ ಸಮಿತಿ ಸಭೆ ಇದೆ. ಇಲ್ಲಿ ಚರ್ಚೆ ಮಾಡಿದ ನಂತರ ಸಮಯ ತೆಗೆದುಕೊಂಡು ವರದಿಯನ್ನು ಸಿಎಂಗೆ ಕೊಡ್ತೀವಿ. 2-3 ದಿನಗಳಲ್ಲಿ ಸಿಎಂಗೆ ವರದಿ ಸಲ್ಲಿಕೆ ಆಗಬಹುದು ಎಂದರು.
2021ರಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಅನುಷ್ಠಾನ ಮಾಡಲಾಗಿದೆ. ರಾಜ್ಯದಲ್ಲಿ ಎಸ್‌ಇಪಿ ಮಧ್ಯಂತರ ವರದಿ ಆಧಾರದ ಮೇಲೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಅನುಷ್ಠಾನ ಆಗಿದೆ. ಶಾಲಾ ಶಿಕ್ಷಣದಲ್ಲಿ ಎಸ್‌ಇಪಿ ಅನುಷ್ಠಾನ ಆಗಿಲ್ಲ. ಎಸ್‌ಇಪಿ ಸಮಿತಿ ವರದಿ ಕೊಟ್ಟ ಬಳಿಕ ಶಾಲಾ ಶಿಕ್ಷಣ ಹಂತದಲ್ಲಿ ಜಾರಿ ಮಾಡಲಾಗುತ್ತದೆ. ಶಾಲಾ ಶಿಕ್ಷಣದಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.ಇದನ್ನೂ ಓದಿ: ಎಸ್‌ಜೆಪಿ ಮಹಿಳಾ ಹಾಸ್ಟೆಲ್ ಅವ್ಯವಸ್ಥೆಗೆ ಉನ್ನತ ಶಿಕ್ಷಣ ಸಚಿವ ಗರಂ