ಧಾರವಾಡ: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಇನ್ನುಮುಂದೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಮರು ಶಿಫಾರಸ್ಸು ಮಾಡುವಂತೆ ಸೂಚಿಸಿದ್ದು, ಇದರ ಹಿಂದೆ ಏನೋ ಷಡ್ಯಂತ್ರವಿದೆ. ನಮ್ಮಲ್ಲಿಯೇ ಜಗಳ ಹಚ್ಚುವ ಆಲೋಚನೆ ಹೊಂದಿದ್ದು, ನಾವು ಇನ್ನು ಮುಂದೆ ಯಾವುದೇ ರ್ಯಾಲಿ ಮಾಡುವುದಿಲ್ಲ. ಬದಲಿಗೆ ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಅವರು ಹೇಳಿದರು.
ಸಿ.ಎಂ.ಕುಮಾರಸ್ವಾಮಿ ಅವರು ಸಾಲ ಮನ್ನಾ ಸಭೆ ಆಯೋಜಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ವಿನಾಕಾರಣ ನೆಪ ಹೇಳಿ ಗೈರಾಗಿದ್ದಾರೆ. ರೈತರ ಬಗ್ಗೆ ಕಾಳಜಿ ಇದ್ದವರು ಸಭೆಗೆ ಏಕೆ ಹೋಗಲಿಲ್ಲ ಎಂದು ಬಿಎಸ್‍ವೈ ವಿರುದ್ಧ ವಾಗ್ದಾಳಿ ನಡೆಸಿದರು.