ಬೆಂಗಳೂರು: ಶನಿವಾರ ರಾತ್ರಿ ಬೆಂಗಳೂರಿನ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸರಣಿ ಅಪಘಾತವಾಗಿದೆ. ಬಿಎಂಟಿಸಿ ಬಸ್, ಬೊಲೆರೊ ಗೂಡ್ಸ್ ಗಾಡಿ ಮತ್ತು ಲಾರಿಯ ನಡುವೆ ಅಪಘಾತವಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಬಿಎಂಟಿಸಿ ಬಸ್ ಸಡನ್ ಆಗಿ ಬ್ರೇಕ್ ಹಾಕಿದ ಕಾರಣ ಬಸ್ ಹಿಂದೆ ಬರುತ್ತಿದ್ದ ಬೊಲೆರೋ ಬಸ್ಸಿಗೆ ಡಿಕ್ಕಿ ಹೊಡೆದ್ರೇ, ಲಾರಿ ಬೊಲೆರೋಗೆ ಡಿಕ್ಕಿ ಹೊಡೆದಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರಿಗೆ ಗಾಯಾಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.