ಹಾಸನ: ಬೆಂಗಳೂರು – ಮಂಗಳೂರು ಹೈವೇಯ (Bengaluru Mangaluru Highway) ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ (Accident) 7 ಕಾರುಗಳು ಜಖಂಗೊಂಡಿವೆ.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ. ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಈ ವೇಳೆ ಅತಿ ವೇಗವಾಗಿ ಬಂದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಮುಂದಿದ್ದ 7 ಕಾರುಗಳು ಜಖಂಗೊಂಡಿವೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ – ಪತ್ನಿ, ಮಕ್ಕಳಿಗೆ ವಿಷ ನೀಡಿ ನೇಣಿಗೆ ವ್ಯಕ್ತಿ ಶರಣು!
- Advertisement
ವೀಕೆಂಡ್ ಹಿನ್ನಲೆಯಲ್ಲಿ ಹೈವೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಸರಣಿ ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು ಜಖಂಗೊಂಡ ವಾಹನವನ್ನು ತೆರವುಗೊಳಿಸಿ, ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
- Advertisement
ಸ್ಥಳಕ್ಕೆ ಆಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ. ಇದನ್ನೂ ಓದಿ: FASTag ಬ್ಯಾಲೆನ್ಸ್ ಇಲ್ಲದೇ ಇದ್ರೆ ದುಪ್ಪಟ್ಟು ದಂಡ: ಇಂದಿನಿಂದ ಏನೇನು ಬದಲಾವಣೆ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ