ಬೆಂಗಳೂರು: ನೆಲಮಂಗಲ (Nelamangala) ನಗರದ ಅರಿಶಿನಕುಂಟೆ ಪ್ಲೈ ಓವರ್ (Arashinakunte Flyover) ಮೇಲೆ ಘಟನೆ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ನಡೆದಿದೆ.
ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ನಾಲ್ಕು ಕಾರುಗಳ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ವೀಕೆಂಡ್ ಹಿನ್ನೆಲೆಯಲ್ಲಿ ಬೇರೆಡೆಗೆ ತೆರಳಿದ್ದವರು ಬೆಂಗಳೂರು ಕಡೆ ಬರುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಾಗೇಪಲ್ಲಿ | ಪ್ಯಾಸೆಂಜರ್ ಆಟೋಗೆ ಕಾರು ಡಿಕ್ಕಿ – ಐವರು ದುರ್ಮರಣ
ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಯಚೂರು | ಪಲ್ಟಿ ಹೊಡೆದು ಮೈಮೇಲೆ ಬಿದ್ದ ಟ್ರ‍್ಯಾಕ್ಟರ್ – ಯುವಕ ಸ್ಥಳದಲ್ಲೇ ಸಾವು
