– ಸಿಗ್ನಲ್‌ನಲ್ಲಿ ನಿಂತಿದ್ದ ಬಸ್‌ಗೆ ಟೆಂಪೋ ಡಿಕ್ಕಿ
– ಬಸ್‌ನಲ್ಲಿ ಸಿಲುಕಿದ್ದ ಮಹಿಳೆಯ ರಕ್ಷಣೆ
ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬಸ್ಸಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಎರಡು ಬಿಎಂಟಿಸಿ (BMTC) ಬಸ್‌ಗಳ ನಡುವೆ ಸರಣಿ ಅಪಘಾತ ಉಂಟಾಗಿ, ಚಾಲಕ ಹಾಗೂ 13 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರಿನ (Bengaluru) ಕೆಆರ್ ಸರ್ಕಲ್‌ನಲ್ಲಿ (KR Circle) ನಡೆದಿದೆ.
ಭೀಕರ ಅಪಘಾತದಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ 13 ಪ್ರಯಾಣಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ರಭಸಕ್ಕೆ ಡ್ರೈವರ್ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯ ಕಾಲು ಸಿಲುಕಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಹಾರೆ, ಕೋಲುಗಳ ಸಹಾಯದಿಂದ ಸತತ ಅರ್ಧಗಂಟೆಗೂ ಹೆಚ್ಚು ಕಾರ್ಯಾಚರಣೆ ನಡೆಸಿ ಮಹಿಳೆಯ ಕಾಲನ್ನು ಸುರಕ್ಷಿತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಮಹಿಳೆಯನ್ನು ಅಂಬುಲೆನ್ಸ್ ಮೂಲಕ ಮಾರ್ಥಾಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು | ಮಕ್ಕಳ ನಡುವೆಯೇ ಮಲಗಿತ್ತು ಬೃಹತ್ ನಾಗರಹಾವು – ಅದೃಷ್ಟವಶಾತ್ ಮಕ್ಕಳು ಪಾರು
ಇನ್ನು ಸರಣಿ ಅಪಘಾತದಲ್ಲಿ ಎರಡೂ ಬಸ್‌ಗಳು ನಜ್ಜುಗುಜ್ಜಾಗಿದ್ದು, ಕ್ರೇನ್ ಮೂಲಕ ಬಸ್‌ಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಪಘಾತದ ಪರಿಣಾಮ ಕೆಆರ್ ಸರ್ಕಲ್‌ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದನ್ನೂ ಓದಿ: ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ
