ನೆಲಮಂಗಲ: ಸಾಲು ಸಾಲು ರಜೆ ಹಿನ್ನೆಲೆ ಬೆಂಗಳೂರಿನಿಂದ ಊರಿಗೆ ತೆರಳುವವರು ಸಂಖ್ಯೆ ಹೆಚ್ಚಾಗಿದ್ದು, ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಉಂಟಾಗಿದೆ. ನೆಲಮಂಗಲ (Nelamangala) ಜಾಸ್ ಟೋಲ್ ಬಳಿ ಮೂರು ಕಾರುಗಳ ನಡುವೆ ಸರಣಿ ಅಪಘಾತ (Accident) ಸಂಭವಿಸಿದೆ.
ಮೂರು ಕಾರಿನಲ್ಲಿದ್ದವರು (Car) ಪ್ರಾಣಪಾಯಂದಿಂದ ಪಾರಾಗಿದ್ದಾರೆ. ಕಾರುಗಳು ಜಖಂ ಆಗಿವೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
22 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿದೆ. ಜೊತೆಗೆ ಇಂದು ಶನಿವಾರ ವೀಕೆಂಡ್, ನಾಳೆ ಭಾನುವಾರ ರಜೆ, ಸೋಮವಾರ ಗಣರಾಜ್ಯೋತ್ಸವ ರಜೆ ಹೀಗಾಗಿ ಜನ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದಾರೆ. ಇನ್ನೂ ಕೆಲವರು ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ನೆಲಮಂಗಲ ಕುಣಿಗಲ್ ಬೈಪಾಸ್ ಬಳಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಇತ್ತ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೇ ಜನರ ಪರದಾಡುತ್ತಿದ್ದಾರೆ.

