ಬೆಂಗಳೂರು: ಹೆಬ್ಬಾಳ ಫ್ಲೈಓವರ್ (Hebbal Flyover) ಮೇಲೆ 10 ಚಕ್ರದ ಲಾರಿ, ಕಸದ ಲಾರಿ ಮತ್ತು ಎರ್ಟಿಗಾ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ (Accident) ಕಸದ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಸದ ಲಾರಿಗೆ ಹಿಂಬದಿಯಿಂದ 10 ಚಕ್ರದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಚಾಲಕ ಫಯಾಜ್ ಅಹಮ್ಮದ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲಿ ಮಧ್ಯರಾತ್ರಿ 2:00 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂರು ವಾಹನಕ್ಕೂ ಹಾನಿಯಾಗಿದೆ. ಕಲ್ಲು ತುಂಬಿದ್ದ ಟ್ರಕ್ ನಡು ರಸ್ತೆಯಲ್ಲೇ ಪಲ್ಟಿಯಾಗಿದ್ದು, ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ.
ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.