ಮೃತ್ಯುಕೂಪವಾಗುತ್ತಿದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ – ಅತಿ ವೇಗಕ್ಕಿಲ್ಲ ಕಡಿವಾಣ!

Public TV
2 Min Read
Bengaluru Mysuru Expressway 2

ರಾಮನಗರ: ಬೆಂಗಳೂರು-ಮೈಸೂರು (Bengaluru- Mysuru) ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಕೆಲವೇ ಗಂಟೆಗಳಲ್ಲಿ ಎರಡು ಪ್ರಮುಖ ನಗರಗಳನ್ನ ಬೆಸೆಯುವ ಎಕ್ಸ್‌ಪ್ರೆಸ್‌ ಹೈವೇ (Expressway) ಇದೀಗ ಮೃತ್ಯುಕೂಪವಾಗಿ ಪರಿಣಮಿಸುತ್ತಿದೆ. ಅವೈಜ್ಞಾನಿಕ ಕಾಮಗಾರಿ, ಸುರಕ್ಷತಾ ಕ್ರಮಗಳು ಹಾಗೂ ಅತಿವೇಗದಿಂದ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಅಪಘಾತ ಸಂಭವಿಸಿ ಸಾವುನೋವುಗಳು ಸಂಭವಿಸುವ ಡೇಂಜರಸ್ ಹೆದ್ದಾರಿಯಾಗಿದೆ.

Bengaluru Mysuru Expressway 4

ಮೈಸೂರು ಬೆಂಗಳೂರು ವಾಹನ ದಟ್ಟಣೆ ನಿಯಂತ್ರಿಸುವ ಸಲುವಾಗಿ ಬಹುಕೋಟಿ ವೆಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣವಾಗಿದೆ. ನೂತನವಾಗಿ ನಿರ್ಮಾಣಗೊಂಡಿರೋ ಹೆದ್ದಾರಿ ಉದ್ಘಾಟನೆಗೂ ಮೊದಲೇ ಮೃತ್ಯುಕೂಪವಾಗಿ ಪರಿಣಮಿಸುತ್ತಿದೆ. ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹಾಗೂ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಬೆಂಗಳೂರಿನಿಂದ ಮೈಸೂರಿನವರೆಗೂ ಸುಮಾರು 130 ಕಿಲೋ ಮೀಟರ್ ದೂರದ ಹೆದ್ದಾರಿ ಈಗಾಗಲೇ ಶೇ.80ರಷ್ಟು ಕಾಮಗಾರಿ ಮುಗಿದಿದ್ದು, ಅಲ್ಲಲ್ಲಿ ಕಾಮಗಾರಿ ನಡೆಯುತ್ತಿದೆ. ಆದರೆ ಸುಂದರವಾದ ರಸ್ತೆಯಲ್ಲಿ ವಾಹನಗಳ ವೇಗದ ಮಿತಿಗೆ ಇದುವರೆಗೂ ಕಡಿವಾಣ ಬಿದ್ದಿಲ್ಲ. ಹೀಗಾಗಿ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕೇರಳದಲ್ಲಿ ಹಕ್ಕಿ ಜ್ವರದ ಭೀತಿ – 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

Bengaluru Mysuru Expressway 3

ದಶಪಥ ಹೆದ್ದಾರಿಯಲ್ಲಿ 16 ಅಪಘಾತ ವಲಯಗಳಿವೆ, ಆದರೆ ಅಪಘಾತ ವಲಯಗಳು ಹಾಗೂ ತೀವ್ರ ತಿರುವುಗಳ ಬಗ್ಗೆ ವಾಹನ ಸವಾರರಿಗೆ ಮಾಹಿತಿ ನೀಡುವ ಫಲಕ ಅಳವಡಿಸಿಲ್ಲ, ಅಲ್ಲದೇ ಮಂದಗತಿ ವಾಹನಗಳು, ದ್ವಿಚಕ್ರ ವಾಹನಗಳು ಎಡಬದಿಯ ಟ್ರ್ಯಾಕ್‍ನಲ್ಲಿ ಚಲಿಸಬೇಕು ಎಂಬ ನಿಯಮವಿದೆ. ಆದರೆ ಯಾರೋಬ್ಬರೂ ಈ ನಿಯಮ ಪಾಲನೆ ಮಾಡದೇ ಇರೋದು ಅಪಘಾತಗಳಿಗೆ ಕಾರಣವಾಗ್ತಿದೆ. ಇತ್ತ ಕಾಮಗಾರಿ ಪೂರ್ಣಗೊಳ್ಳದೇ ಪೊಲೀಸ್ ಪೆಟ್ರೋಲಿಂಗ್ ಕೂಡಾ ಸಾಧ್ಯವಾಗದೇ ಅತಿವೇಗದ ವಾಹನಗಳಿಗೆ ಕಡಿವಾಣ ಇಲ್ಲದಂತಾಗಿದೆ.

Bengaluru Mysuru Expressway 5

ಅಂದಹಾಗೆ ರಾಮನಗರ ಜಿಲ್ಲೆಯಲ್ಲಿ ವಿವಿಧ ಪೊಲೀಸ್ (Police) ಠಾಣಾ ವ್ಯಾಪ್ತಿಗಳಲ್ಲಿ ಈ ವರ್ಷದಲ್ಲಿ ಸುಮಾರು 1,262 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 302 ಜನರು ಸಾವನ್ನಪ್ಪಿದ್ರೆ, 1,272 ಜನರು ಗಾಯಗೊಂಡಿದ್ದಾರೆ. ನೂತನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ ಆರು ತಿಂಗಳಲ್ಲಿ 77 ಅಪಘಾತ ಪ್ರಕರಣಗಳು ಸಂಭವಿಸಿದ್ದು, ಅದರಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಇನ್ನು 64 ಜನರಿಗೆ ಗಾಯಗಳಾಗಿವೆ. ಇದು ಕೂಡ ಆತಂಕಕ್ಕೆ ಕೂಡ ಕಾರಣವಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೂಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ವಹಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ಮದ್ಯವ್ಯಸನಿ ಅಧಿಕಾರಿಗಿಂತ ರಿಕ್ಷಾ ಎಳೆಯುವವನು ಉತ್ತಮ ವರನಾಗಬಹುದು: ಮಗನ ನೋವಿನ ಕಥೆ ವಿವರಿಸಿದ ಕೇಂದ್ರ ಸಚಿವ

Bengaluru Mysuru

ಒಟ್ಟಾರೆ ನೂತನ ಎಕ್ಸ್ ಪ್ರೆಸ್ ಹೈವೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕ್ರಮವಹಿಸಬೇಕಿದೆ. ಹೆದ್ದಾರಿ ಸುರಕ್ಷತಾ ಕ್ರಮಗಳ ತೆಗೆದುಕೊಳ್ಳುವುದು ಹೇಗೆ ಎಂಬುದೇ ತಲೆನೋವಾಗಿ ಪರಿಣಮಿಸಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *