BollywoodCinemaLatestLeading NewsMain Post

ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

ಬೆಂಗಳೂರು: ಫ್ಯಾಟ್‌ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಕಿರುತೆರೆ ಯುವ ನಟಿ ಚೇತನಾ ರಾಜ್‌ ಮೃತಪಟ್ಟಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ದುರಂತ ಸಾವಿಗೀಡಾಗಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಅಬ್ಬಿಗೆರೆಯಲ್ಲಿ ನಟಿ ಕುಟುಂಬ ವಾಸವಿದೆ. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ನಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆಯಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಮಂಡ್ಯ ಹುಡುಗರ ಪ್ರೀತಿಗೆ ಸನ್ನಿ ಲಿಯೋನ್ ಫಿದಾ

ಫ್ಯಾಟ್ ಚಿಕಿತ್ಸೆಗೆಂದು ನಿನ್ನೆ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ಆಡ್ಮಿಟ್ ಆಗಿದ್ದರು. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಸಿರಿಯಸ್‌ ಆಗಿ ಶಂಕರಮಠದ ಕಾಡೇ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಬರುವ ಗೀತಾ, ದೊರೆಸಾನಿ, ಒಲವಿನ ನಿಲ್ದಾಣ ದಾರಾವಾಹಿಗಳಲ್ಲಿ ಚೇತನಾ ರಾಜ್‌ ನಟಿಸುತ್ತಿದ್ದರು. ಇನ್ನೂ ಬಿಡುಗಡೆಯಾಗದ ಹವಾಯಾಮಿ ಸಿನಿಮಾದಲ್ಲೂ ನಟಿಸಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅವರಿಗೆ ಕಲರ್ಸ್ ಕನ್ನಡದ ʻಒಲವಿನ ನಿಲ್ದಾಣʼ ಅನ್ನೋ ಹೊಸ ಧಾರವಾಹಿಯಲ್ಲಿ ಮುಖ್ಯ ಪಾತ್ರ ಸಿಕ್ಕಿತ್ತು. ಇದನ್ನೂ ಓದಿ: ಕಿಚ್ಚನ `ವಿಕ್ರಾಂತ್ ರೋಣ’ ಚಿತ್ರದ ಜವಾಬ್ದಾರಿ ಹೊತ್ತ ಸಲ್ಮಾನ್ ಖಾನ್

ಪೋಷಕರಿಗೆ ಮಾಹಿತಿ ನೀಡದೇ ಚೇತನಾ ರಾಜ್ ಫ್ಯಾಟ್‌ ಸರ್ಜರಿ ಮಾಡಿಸಿಕೊಂಡಿದ್ದರು. ಸೋಮವಾರ ಬೆಳಗ್ಗೆ 9:30 ಕ್ಕೆ ಆಸ್ಪತ್ರೆಗೆ ದಾಖಲಾಗಿ ಸರ್ಜರಿ ಮಾಡಿಸಿಕೊಂಡಿದ್ದಾರೆ. ನಂತರ ವಿಚಾರ ಗೊತ್ತಾಗಿ ಪೋಷಕರು ಆಸ್ಪತ್ರೆಗೆ ಹೋಗಿದ್ದರು. ಸರ್ಜರಿ ನಂತರ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು ನಟಿ ಪರಿಸ್ಥಿತಿ ಗಂಭೀರವಾಗಿದೆ. ನಾಲ್ಕು ಗಂಟೆಗೆ ಹೆಚ್ಚಿನ ಚಿಕಿತ್ಸೆಗೆ ಮತ್ತೊಂದು ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಅಷ್ಟರಲ್ಲಾಗಲೇ ನಟಿ ಮೃತಪಟ್ಟಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ಚೇತನಾ ರಾಜ್‌ ಮೃತಪಟ್ಟಿದ್ದಾಳೆ. ಯಾವುದೇ ಪೋಷಕರ ಅನುಮತಿ ಇಲ್ಲದೇ ಹೇಗೆ ಸರ್ಜರಿ ಮಾಡಿದರು. ಆಸ್ಪತ್ರೆಯವರೇ ಚೇತನಾ ರಾಜ್ ಸಾವಿಗೆ ಕಾರಣ. ಚೇತನಾ ರಾಜ್ ದೊಡ್ಡಪ್ಪ ರಾಜಣ್ಣ ಆರೋಪಿಸಿದ್ದಾರೆ.

Leave a Reply

Your email address will not be published.

Back to top button