ಬೆಂಗಳೂರು: ಇತ್ತೀಚೆಗೆ ಕಿರುತೆರೆ ಮತ್ತು ಬೆಳ್ಳಿತೆರೆ ನಟ-ನಟಿಯರು ಹಸೆಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ‘ಕವಲು ದಾರಿ’ ಖ್ಯಾತಿಯ ನಟ ರಿಷಿ ಇಂದು ತಮ್ಮ ಗೆಳತಿಯನ್ನು ಮದುವೆಯಾಗಿದ್ದಾರೆ. ಇದೀಗ ಈ ಸಾಲಿಗೆ ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿಯೊಬ್ಬರು ತಮ್ಮ ಗೆಳೆಯನನ್ನು ವರಿಸುವ ಮೂಲಕ ಸಪ್ತಪದಿ ತುಳಿದಿದ್ದಾರೆ.
ಹೌದು. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಇಶಿತಾವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹುಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
Advertisement
Advertisement
ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ ಜೋಡಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಇಶಿತಾ ತಮ್ಮ ಮದುವೆಯ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Advertisement
ಮುರುಗಾನಂದ್ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಶಿತಾ ಕೂಡ ಕಿರುತೆರೆ ಜೊತೆಗೆ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಮುರುಗಾನಂದ್ ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋಗಳಲ್ಲಿಯೂ ಕೊರಿಯೋಗ್ರಾಫ್ ಮಾಡುತ್ತಿದ್ದಾರೆ.