ಯಾದಗಿರಿ: ಜಿಲ್ಲೆಯಲ್ಲಿ ನವಜಾತ ಶಿಶುಗಳ ಸರಣಿ ಸಾವು ಮುಂದುವರೆದಿದ್ದು, ಎರಡು ವಾರದ ಅಂತರದಲ್ಲಿ ಮೂರು ಶಿಶುಗಳು ಮೃತಪಟ್ಟಿವೆ. ಈ ಘಟನೆ ಯಾದಗಿರಿ (Yadagiri) ಜಿಲ್ಲೆಯ ಗುರುಮಠಕಲ್ (Gurumitkal) ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ನಿನ್ನೆ (ಎ.08) ತಪಾಸಣೆಗಾಗಿ ಗರ್ಭಿಣಿ ಗಾಯತ್ರಿ ದಾಸರಿ ಎಂಬವರು ಗುರುಮಠಕಲ್ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದಿದ್ದರು. ಈ ವೇಳೆ ವೈದ್ಯರು ಕೆಲವು ತಪಾಸಣೆಗಾಗಿ ಜಿಲ್ಲಾಸ್ಪತ್ರೆಗೆ ಹೋಗಲು ಸೂಚಿಸಿದ್ದರು. ಆದರೆ ತಡರಾತ್ರಿ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ.ಇದನ್ನೂ ಓದಿ: ಹೆಚ್ಚುವರಿ ಪರಿಹಾರ ನೀಡದ್ದಕ್ಕೆ ಸಣ್ಣ ನೀರಾವರಿ ಇಲಾಖೆಯ 1.43 ಲಕ್ಷ ರೂ. ಮೌಲ್ಯದ ಪೀಠೋಪಕರಣ ಜಪ್ತಿ
Advertisement
Advertisement
ಆಸ್ಪತ್ರೆಗೆ ಬರುತ್ತಲೇ ಮಗುವಿನ ಅರ್ಧದೇಹ ಹೊರಗೆ ಬಂದಿತ್ತು. ಆದರೆ ಈ ಸಮಯದಲ್ಲಿ ಜಿಲ್ಲಾಸ್ಪತ್ರೆಗೆ ಹೋಗಲು ಯಾವುದೇ ಅಂಬುಲೆನ್ಸ್ ಇರಲಿಲ್ಲ. ಹೀಗಾಗಿ, ಸಿಬ್ಬಂದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ಹೆರಿಗೆ ಮಾಡಿದ್ದಾರೆ. ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಮೃತಪಟ್ಟಿದೆ.
Advertisement
ಶಿಶು ಮೃತಪಟ್ಟ ಹಿನ್ನೆಲೆ ಡಿಹೆಚ್‌ಓ ಮಹೇಶ್ ಬಿರಾದಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪೇದೆ ಆತ್ಮಹತ್ಯೆ
Advertisement