ಹಾಸನ: ತಡರಾತ್ರಿ 8 ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ನಡೆದಿದೆ. ರಾತ್ರೋರಾತ್ರಿ ಬಟ್ಟೆ ಅಂಗಡಿಗೆ ನುಗ್ಗಿದ ಕಳ್ಳರು ಅಳತೆ ನೋಡಿ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ.
ಹೊಳೆನರಸೀಪುರದ ಹೃದಯ ಭಾಗದಲ್ಲಿರುವ ಪುರಸಭೆ ಎದುರೇ ಇರುವ 7 ದಿನಸಿ ಅಂಗಡಿಗಳು, 1 ಬಟ್ಟೆ ಅಂಗಡಿಯಲ್ಲಿ ತಡರಾತ್ರಿ ಕಳ್ಳತನ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ರೋಲಿಂಗ್ ಶಟರ್ ಮುರಿದು ಒಳನುಗ್ಗಿದ ಕಳ್ಳರು 5 ಲಕ್ಷ ರೂ. ನಗದು, ಬೆಲೆ ಬಾಳುವ ಬಟ್ಟೆಗಳು ಹಾಗೂ ವಸ್ತುಗಳನ್ನು ಕೊಂಡೊಯ್ದಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ – ಚಕ್ಕಿ ನದಿ ಮೇಲಿನ ರೈಲ್ವೆ ಸೇತುವೆ ಕುಸಿತ
Advertisement
Advertisement
ಅಂಗಡಿಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸ್ ಬೀಟ್ ವ್ಯವಸ್ಥೆ ಸರಿಯಾಗಿ ಇಲ್ಲದೆ ಇರುವುದೇ ಕಳ್ಳತನಕ್ಕೆ ಕಾರಣ ಎಂದು ವರ್ತಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮುಂಬೈ ತಾಜ್ ಹೋಟೆಲ್ ಮಾದರಿಯಲ್ಲೇ ಭೀಕರ ಗುಂಡಿನ ದಾಳಿ – 8 ನಾಗರಿಕರ ಬಲಿ