ಬೆಂಗಳೂರು: ಟ್ಯಾಕ್ಸಿ ಚಾಲಕನೊಬ್ಬ ಕುಡಿದು ಕಾರು ಓಡಿಸಿ ಸರಣಿ ಅಪಘಾತ ಮಾಡಿದ ಪರಿಣಾಮ ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿಗೆ ಹೊಂದಿಕೊಂಡಿರೋ ತಮಿಳುನಾಡಿನ ಹೊಸೂರು ಪಟ್ಟಣದಲ್ಲಿ ನಡೆದಿದೆ.
ಕುಡಿದು ವಾಹನ ಚಾಲನೆ ಮಾಡಿ ಸಾರ್ವಜನಿಕರಿಂದ ಒದೇ ತಿಂದ ಚಾಲಕನನ್ನು ಪಂಡಿಚೇರಿಯ ವಿಧುರಾಚಲಂ ಪಟ್ಟಣದ ಮದಿ ಅಳಗನ್ ಎಂದು ಗುರುತಿಸಲಾಗಿದೆ. ಈತ ಕ್ವಿಕ್ ಟ್ಯಾಕ್ಸಿ ಚಾಲನೆ ಮಾಡುತ್ತಿದ್ದು, ಶನಿವಾರ ಬೆಳಿಗ್ಗೆ ಬೆಂಗಳೂರಿಗೆ ಪ್ರಯಾಣಿಕರನ್ನು ಬಿಟ್ಟು ಹೊರಡುವ ವೇಳೆ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ್ದಾನೆ.
ಮತ್ತಿನಲ್ಲಿದ್ದ ಅಳಗನ್ ಮೊದಲಿಗೆ ತಮಿಳುನಾಡು ಸಾರಿಗೆ ಬಸ್ಸಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಳ್ಳುವ ಭರದಲ್ಲಿ ಹೊಸೂರು ಬಸ್ ನಿಲ್ದಾಣದ ಮುಂಭಾಗ ಕಾರು ಹಾಗೂ ಟಿವಿಎಸ್ ಎಕ್ಸೆಲ್ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಕಾರಿನ ಗಾಜುಗಳ ಮೇಲೆ ಕಲ್ಲು ಎಸೆದು ದೊಣ್ಣೆಗಳಿಂದ ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಳಗನ್ ನನ್ನು ಕಾರಿನಿಂದ ಹೊರಗೆಳೆದು ಬಟ್ಟೆಬಿಚ್ಚಿ ಹಿಗಾಮುಗ್ಗ ಥಳಿಸಿದ್ದಾರೆ.
ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮದಿ ಅಳಗನ್‍ನನ್ನು ಹೊಸೂರು ಪೊಲೀಸರು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv