ಬೆಂಗಳೂರು: ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ, ಪವಾಡ ರೀತಿಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ.
ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಬಳಿ ಐದು ಕಾರು ಹಾಗೂ ಒಂದು ಕ್ಯಾಂಟರ್ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ರಸ್ತೆ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲಿ ಕಾರುಗಳು ಉರುಳಿ ಬಿದ್ದಿದೆ.
Advertisement
Advertisement
ಘಟನೆಯಲ್ಲಿ ಕಾರಿನಲ್ಲಿದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತ ದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿ ಕೆಲ ಸಮಯ ವಾಹನ ಸವಾರರು ಪರದಾಡಿದರು. ಘಟನಾ ಸ್ಥಳಕ್ಕೆ ಡಾಬಸ್ ಪೇಟೆ ಹಾಗೂ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಸಂಚಾರ ದಟ್ಟಣೆ ನಿಯಂತ್ರಿಸಲು ಹರಸಾಹಸ ಪಟ್ಟರು.