Sunday, 19th May 2019

ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಗ್ರಾಮಸ್ಥರಿಂದ ಪ್ರತಿಭಟನೆ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತವಾಗಿದ್ದು, ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ಈ ಘಟನೆ ಸಂಭವಿಸಿದೆ. ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಒಂದು ಬೈಕ್, ಎರಡು ಕಾರು ಹಾಗೂ ಒಂದು ಜೀಪ್‍ನ ನಡುವೆ ಅಪಘಾತ ಸಂಭವಿಸಿ, ಐವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸರ್ವಿಸ್ ರಸ್ತೆ ಇಲ್ಲದಿರುವುದೇ ಈ ಸರಣಿ ಅಪಘಾತಕ್ಕೆ ಕಾರಣಕ್ಕೆ ಎಂದು ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ಎರಡು ಮಾರ್ಗಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಎರಡು ಮಾರ್ಗಗಳು ಸಂಪೂರ್ಣ ಸ್ತಬ್ಧವಾಗಿ ಐದಾರು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬಳಿಕ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಪೊಲೀಸರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಶುರುವಾಗಿ, ಸರ್ವಿಸ್ ರಸ್ತೆ ಮಾಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *