Tuesday, 23rd July 2019

ಟಯರ್ ಸ್ಫೋಟಗೊಂಡು ಸಿಲಿಂಡರ್ ವಾಹನ ಪಲ್ಟಿ – ಐದು ವಾಹನಗಳು ಜಖಂ

ಬೆಂಗಳೂರು: ಸಿಲಿಂಡರ್ ಗಳನ್ನು ತುಂಬಿಕೊಂಡು ಹೊರಟಿದ್ದ ವಾಹನದ ಟೈಯರ್ ಸ್ಫೋಟಗೊಂಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿ ನಡೆದಿದೆ.

ಸಿಲಿಂಡರ್ ತುಂಬಿಕೊಂಡು ಬರುತ್ತಿದ್ದ ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಈ ವೇಳೆ ಲಾರಿ ಹಿಂಬದಿ ಬರುತ್ತಿದ್ದ ಮಿನಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇನ್ನೊಂದು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಟ್ಟು ಐದು ವಾಹನಗಳು ಜಖಂಗೊಂಡಿದ್ದು, ಮೂವರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸರಣಿ ಅಪಘಾತದಿಂದ ಮಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Leave a Reply

Your email address will not be published. Required fields are marked *