Connect with us

Districts

ಚಾಲಕನ ಎಡವಟ್ಟು – ಒಂದಕ್ಕೊಂದು ಡಿಕ್ಕಿ ಹೊಡೆದ 4 ಕಾರುಗಳು

Published

on

ಮೈಸೂರು: ಕೇರಳದ ಕಾರು ಚಾಲಕನ ಎಡವಟ್ಟಿಗೆ ಮೈಸೂರಿನಲ್ಲಿ ಸರಣಿ ಅಪಘಾತ ಸಂಭವಿಸಿ 4 ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ.

ಮೈಸೂರಿನ ಒಳ ಭಾಗದಲ್ಲಿನ ಪಡುವರಹಳ್ಳಿ ಬಳಿ ಹುಣಸೂರು – ಮೈಸೂರು ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕೇರಳ ಮೂಲದ ಕಾರು ಚಾಲಕ ರಸ್ತೆ ಮಧ್ಯದಲ್ಲಿ ಏಕಾಏಕಿ ಬ್ರೇಕ್ ಹಾಕಿದ್ದಾನೆ.

ಬ್ರೇಕ್ ಹಾಕಿದ್ದ ಪರಿಣಾಮ ಆ ಕಾರಿನ ಹಿಂದೆ ಬರುತ್ತಿದ್ದ ಕಾರುಗಳ ಡ್ರೈವರ್ ಗಳು ತಕ್ಷಣವೇ ಬ್ರೇಕ್ ಹಾಕಿದ್ದಾರೆ. ಆದರೂ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದಿವೆ. ಕಾರುಗಳು ಡಿಕ್ಕಿ ಹೊಡೆದಿದ್ದರಿಂದ ಹುಣಸೂರು – ಮೈಸೂರು ಮುಖ್ಯ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ವಿವಿ ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಸಂಚಾರಕ್ಕೆ ಉಂಟಾಗಿದ್ದ ಅಡಚಣೆಯನ್ನು ನಿವಾರಿಸಿ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಅವಘಡದಿಂದ ಯಾವುದೇ ಅಪಾಯಗಳು ಸಂಭವಿಸಿಲ್ಲ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *