ಮೈಸೂರು: ಜಿಲ್ಲೆಯ ನಂಜನಗೂಡಲ್ಲಿ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ. ಬಸ್, ಕ್ರೇನ್, ಟಾಟಾ ಸುಮೋ ವಾಹನಗಳ ನಡುವೆ ಪರಸ್ಪರ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕ್ರೇನ್ ಮಗುಚಿ ಬಿದ್ದಿದೆ.
ಕಾಂಗ್ರೆಸ್ ಮತ್ತು ಬಿಜೆಪಿಯ ಚುನಾವಣಾ ಕಚೇರಿ ಇರುವ ಮಹಾತ್ಮ ಗಾಂಧಿ ರಸ್ತೆಯಲ್ಲೇ ಈ ಘಟನೆ ನಡೆದಿದೆ. ಬಸ್ ಮತ್ತು ಕ್ರೇನ್‍ಗಳ ಮಧ್ಯೆ ಟಾಟಾ ಸುಮೋ ಸಿಲುಕಿದೆ. ಕ್ರೇನ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಅಂತಾ ಸ್ಥಳೀಯರು ತಿಳಿಸಿದ್ದಾರೆ.
ಅಕ್ಸಿಡೆಂಟ್ ಹಿನ್ನೆಲೆಯಲ್ಲಿ ಮಹಾತ್ಮಾ ಗಾಂಧೀಜಿ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳಕ್ಕೆ ನಂಜನಗೂಡು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.