ಪರೀಕ್ಷೆ ಬಗ್ಗೆ ವದಂತಿ ಹರಡಿಸೋರ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್

Public TV
1 Min Read
suresh kumar 3

ಬೆಂಗಳೂರು: ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ದ್ವೀತಿಯ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಅಗತ್ಯ ಎಲ್ಲಾ ಕ್ರಮಗಳನ್ನ ತೆಗೆದುಕೊಂಡಿದೆ. ಪರೀಕ್ಷಾ ಅಕ್ರಮ ತಡೆಗೆ ಅಗತ್ಯ ಸಿದ್ಧತೆ, ಭದ್ರತೆ ತೆಗೆದುಕೊಳ್ಳಲು ಮುಂದಾಗಿದೆ. ಪರೀಕ್ಷಾ ಸಮಯದಲ್ಲಿ ವದಂತಿ ಹರಡಿಸೋ ಕಿಡಿಗೇಡಿಗಳ ಮೇಲೆ ಕಣ್ಣಿಟ್ಟಿರೋ ಶಿಕ್ಷಣ ಇಲಾಖೆ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಪರೀಕ್ಷಾ ಭದ್ರತೆ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗೃಹ ಇಲಾಖೆ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಭದ್ರತೆ ಹಾಗೂ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚೆ ಮಾಡಲಾಯಿತು. ಸಭೆ ಬಳಿಕ ಮಾತನಾಡಿದ ಸಚಿವ ಸುರೇಶ್ ಕುಮಾರ್, ವದಂತಿ ಹರಡಿಸೋ ಕಿಡಿಗೇಡಿಗಳ ಮೇಲೆ ಸೈಬರ್ ಕ್ರೈಂ ನಿಗಾ ಇಡಲಿದೆ. ವದಂತಿ ಹರಡಿಸೋರಿಗೆ ಕಠಿಣ ಶಿಕ್ಷೆ ತಪ್ಪಲ್ಲ ಅಂತ ಎಚ್ಚರಿಕೆ ಕೊಟ್ಟರು.

exam copy e1579574890445

ಈ ಬಾರಿ ಸುಮಾರು 6,80,498 ವಿದ್ಯಾರ್ಥಿಗಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 1016 ಪರೀಕ್ಷಾ ಕೇಂದ್ರ ನಿಗದಿ ಮಾಡಲಾಗಿದೆ. 160 ಕೇಂದ್ರಗಳು ಬೆಂಗಳೂರಿನಲ್ಲಿವೆ. ಸೂಕ್ತ ಭದ್ರತೆಗೆ ಕ್ರಮ ತೆಗೆದುಕೊಂಡಿದ್ದೇವೆ. ಪರೀಕ್ಷಾ ಅಕ್ರಮ ತಡೆಯಲು ಟ್ಯೂಷನ್ಸ್, ಜೆರಾಕ್ಸ್ ಶಾಪ್, ಸೈಬರ್ ಸೆಂಟರ್ ಮೇಲೆ ವಿಶೇಷ ನಿಗಾ ಇಡಲಾಗುತ್ತೆ. ಪ್ರಶ್ನೆ ಪತ್ರಿಕೆ ಇಡೋ ಖಜಾನೆಗಳಲ್ಲಿ ಅಗತ್ಯ ಭದ್ರತೆ ನೀಡಲಾಗುತ್ತೆ. ಪರೀಕ್ಷಾ ಕೇಂದ್ರದ ಸುತ್ತ ಭದ್ರತೆ ನಿಯೋಜನೆ ಮಾಡಲಾಗುತ್ತೆ ಅಂತ ತಿಳಿಸಿದರು.

ಇದೇ ಮೊದಲ ಬಾರಿಗೆ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ನಿಷೇಧ ಮಾಡೋಕೆ ಆದೇಶ ಮಾಡಲಾಗಿದೆ. ವಿದ್ಯಾರ್ಥಿಗಳು ಮಾತ್ರ ಅಲ್ಲ ಪರೀಕ್ಷಾ ಕೆಲಸಕ್ಕೆ ಹಾಜರಾಗೋ ಎಲ್ಲಾ ಸಿಬ್ಬಂದಿಗೂ ಮೊಬೈಲ್ ನಿಷೇಧ ಮಾಡಲಾಗುತ್ತೆ. ಅಲ್ಲದೆ ಇದೇ ಮೊದಲ ಬಾರಿಗೆ ಎಲ್ಲ ಡಿಸಿ ಕಚೇರಿಯಲ್ಲಿ ಖಜಾನೆ ಭದ್ರತೆಯ ಕುರಿತು ಸಿಸಿಟಿವಿ ಮಾನಿಟರಿಂಗ್ ವ್ಯವಸ್ಥೆಯನ್ನು ಪಿಯುಸಿ ಬೋರ್ಡ್ ಮಾಡುತ್ತಿದೆ.

suresh kumar 3

Share This Article
Leave a Comment

Leave a Reply

Your email address will not be published. Required fields are marked *