ಮಂಡ್ಯ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ನೌಕರರ ಖಾತೆಗೆ ಕನ್ನ ಹಾಕಿರುವ ಗಂಭೀರ ಆರೋಪ ಕೇಳಿ ಬಂದಿದೆ.
ಬ್ಯಾಂಕ್‌ನ ಆಡಳಿತ ಮಂಡಳಿಯವರೇ ನೌಕರರ ಖಾತೆಗೆ ಕನ್ನ ಹಾಕಿರುವ ಆರೋಪ ಕೇಳಿಬಂದಿದೆ. ಎಲ್ಲಾ ನೌಕರರಿಗೂ 2017ರ ಸಾಲಿನಲ್ಲಿ ಅರಿಯರ್ಸ್ ಬಿಡುಗಡೆಯಾಗಿತ್ತು. ಆಡಳಿತ ಮಂಡಳಿ ಪ್ರತಿ ನೌಕರರ 9 ತಿಂಗಳ ಅರಿಯರ್ಸ್ ಹಣವನ್ನು ಲಂಚವಾಗಿ ವಸೂಲಿ ಮಾಡಿದ್ದಾರೆ. ಬ್ಯಾಂಕ್‌ನ ಸುಮಾರು 400 ನೌಕರರ ತಲಾ 78,264 ರೂ.ನಲ್ಲಿ 53,784 ರೂ.ಯನ್ನು ಲಂಚವಾಗಿ ಪಡೆದಿದ್ದಾರೆ. ಪ್ರತಿ ನೌಕರನ ಖಾತೆಗೆ ಡೆಪಾಸಿಟ್ ಆದ ದಿನವೇ ಸೆಲ್ಫ್ ಡ್ರಾ ಮೂಲಕ ಹಣ ಸಂಗ್ರಹಿಸಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಮಹಾ ಕುಂಭ ಮೇಳ | ಡೇರೆಯಲ್ಲಿ ಅಗ್ನಿ ಅವಘಡ – ಓರ್ವನಿಗೆ ಗಾಯ
Advertisement
Advertisement
ಇನ್ನು ಆಡಳಿತ ಮಂಡಳಿಯವರ ನಡೆಗೆ ಆರಂಭದಲ್ಲಿ ಹಲವು ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗೆ, ವಿರೋಧ ವ್ಯಕ್ತಪಡಿಸುವ ನೌಕರರನ್ನ ದೂರಕ್ಕೆ ವರ್ಗಾವಣೆ ಮಾಡುವುದಾಗಿ ಅಥವಾ ಇಲ್ಲಸಲ್ಲದ ಆರೋಪ ಹೊರಿಸಿ ಅಮಾನತು ಮಾಡುವ ಶಿಕ್ಷೆ ನೀಡಿತ್ತಿದ್ದರು. ಇದ್ಯಾವುದಕ್ಕೂ ಬಗ್ಗದ ಇಬ್ಬರು ನೌಕರರನ್ನ ಆಡಳಿತ ಮಂಡಳಿ ಅಮಾನತು ಮಾಡಲಾಗಿದೆ. ಈ ಎಲ್ಲಾ ಬೆದರಿಕೆಯಿಂದ ಮನನೊಂದ ನೌಕರರು ವಿಧಿ ಇಲ್ಲದೆ ಆಡಳಿತ ಮಂಡಳಿಯವರಿಗೆ ಲಂಚ ಕೊಟ್ಟು ತಮ್ಮ ಸ್ಥಾನ ಉಳಿಸಿಕೊಂಡಿದ್ದಾರೆ. ಇದನ್ನೂ ಓದಿ: 28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಕಾ ಜಾಲ ಪತ್ತೆ – ದೆಹಲಿ ಮೂಲದ ಪ್ರಮುಖ ಆರೋಪಿ ಅರೆಸ್ಟ್
Advertisement
ನೌಕರರಿಂದ ಹಣ ವಸೂಲಿಗೆ ಎಂದು ತಾಲೂಕಿಗೆ ಇಬ್ಬರನ್ನ ನೇಮಿಸಲಾಗಿತ್ತು. ಆ 7 ತಾಲೂಕುಗಳಿಂದ ವಸೂಲಿ ಮಾಡಿದ ಹಣವನ್ನ ಕೆ.ಶಂಕರ್ ಎಂಬಾತ ಸಂಗ್ರಹಿಸಿದ್ದ. ಶಂಕರ್ ಎಂಬಾತ 2024ರ ಮೇ 16ರಂದು ಅಮರಾವತಿ ಹೋಟೆಲ್‌ನಲ್ಲಿ ಆಡಳಿತ ಮಂಡಳಿಯವರಿಗೆ ಹಸ್ತಾಂತರ ಮಾಡಿದ್ದ. ಇದರ ಹಿಂದೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ಪಾತ್ರ ಇರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಪಟ್ಟ ಕೆಲವು ದಾಖಲೆಗಳು ನನ್ನ ಬಳಿ ಇವೆ. ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ಕೊಡುತ್ತೇನೆ. ಸೂಕ್ತ ತನಿಖೆ ಮಾಡಿ ಇದರಲ್ಲಿ ಯಾರು ಯಾರು ಪಾತ್ರಧಾರಿಗಳು ಎಂಬುದು ಬಹಿರಂಗ ಆಗಬೇಕು ಎಂದು ಡಾ.ಹೆಚ್.ಎನ್.ರವೀಂದ್ರ ಆಗ್ರಹಿಸಿದ್ದಾರೆ.
Advertisement
ಒಂದೆಡೆ ಡಾ.ರವೀಂದ್ರ ಡಿಸಿಸಿ ಬ್ಯಾಂಕ್ (DCC Bank) ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದರೆ, ಮತ್ತೊಂದೆಡೆ ನೌಕರರ ಸಂಘದ ಕೆಲವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರನ್ನ ಭೇಟಿ ಮಾಡಿರುವ ಜೊತೆಗೆ ರಾಜ್ಯ ಸರ್ಕಾರಕ್ಕೆ ಸುಧೀರ್ಘ ಪತ್ರ ಬರೆದು ತಮ್ಮ ನೋವು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ರಸ್ತೆ ದಾಟುವಾಗ ಬಿಎಂಟಿಸಿ ಬಸ್ ಡಿಕ್ಕಿ – ಮಹಿಳೆ ಸಾವು
ಡಾ.ರವೀಂದ್ರ ಅವರ ಆರೋಪ ಈ ಸಂಬಂಧ ಪ್ರತಿಕ್ರಿಯಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ರವೀಂದ್ರ ಒಬ್ಬ ಫ್ರಾಡ್. ಆ ರೀತಿಯ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ದಾಖಲೆಗಳಿದ್ದರೆ ಲೋಕಾಯುಕ್ತಕ್ಕಲ್ಲ, ಯಾವುದೇ ತನಿಖೆಗೂ ಸಿದ್ಧ. ಅವರು ಮಾಡಿರುವ ಆರೋಪ ಸಾಬೀತಾದರೆ ರಾಜೀನಾಮೆ ಕೊಡಲು ಸಿದ್ಧರಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ʻಕೈʼಮುಖಂಡನ ಹತ್ಯೆ ಕೇಸ್ – ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ