Connect with us

Karnataka

ಆಕ್ಸಿಜನ್ ಸಿಲಿಂಡರ್‌ಗಳು ಬರಿದಾಗಲಿದ್ದು, ದಯವಿಟ್ಟು ಪೂರೈಸಿ: ಕೇಜ್ರಿವಾಲ್

Published

on

ನವದೆಹಲಿ: ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಸಿಲಿಂಡರ್ ಕೊರತೆ ಉಂಟಾಗುತ್ತಿದೆ. ಆಮ್ಲಜನಕವನ್ನು ಪೂರೈಸಿ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ವಿಪರೀತ ಹಂತ ತಲುಪಿದ್ದು, ಕೆಲವು ಆಸ್ಪತ್ರೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಆಮ್ಲಜನಕದ ಸಿಲಿಂಡರ್‌ಗಳು ಬರಿದಾಗಲಿವೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಆಮ್ಲಜನಕ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ನಾನು ಮನವಿ ಮಾಡುತ್ತೇನೆ ಎಂದು ಆತಂಕ ವ್ಯಕ್ತಪಡಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ 8-10 ಗಂಟೆಗಳವರೆಗೆ ಲಭ್ಯವಿದೆ. ದೆಹಲಿಯ ಹೆಚ್ಚಿನ ಆಸ್ಪತ್ರೆಗಳಲ್ಲಿ, ಮುಂದಿನ 8 ರಿಂದ 12 ಗಂಟೆಗಳವರೆಗೆ ಮಾತ್ರ ಆಮ್ಲಜನಕ ಲಭ್ಯವಿದೆ. ದೆಹಲಿಗೆ ಆಮ್ಲಜನಕ ಪೂರೈಕೆ ಕೋಟಾವನ್ನು ಹೆಚ್ಚಿಸಲು ನಾವು ಒಂದು ವಾರದಿಂದ ಒತ್ತಾಯಿಸುತ್ತಿದ್ದೇವೆ.  ಆಮ್ಲಜನಕವು ಸಾಕಷ್ಟು ಪ್ರಮಾಣದಲ್ಲಿ ಆಸ್ಪತ್ರೆಗಳನ್ನು ತಲುಪದಿದ್ದರೆ, ಆಕ್ರೋಶ ಉಂಟಾಗುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ

ದೆಹಲಿಯಲ್ಲಿ ನಿನ್ನೆ ರಾತ್ರಿ 10 ಗಂಟೆಗೆ ಪ್ರಾರಂಭವಾದ ಲಾಕ್‍ಡೌನ್ ಏಪ್ರಿಲ್ 26ರ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಇರಲಿದೆ. ಅಗತ್ಯ ಸೇವೆಗಳಿಗೆ ಮಾತ್ರ ಅನುವು ಮಾಡಿಕೊಡಲಾಗಿದೆ. ಆದರೆ ಜನರು ಭಯಗೊಂಡು ತಮ್ಮ ಊರುಗಳಿಗೆ ಪ್ರಯಾಣ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *