ಸೇವೆ v/s ಸುಲಿಗೆ – ಡಿಕೆ ಸುರೇಶ್ ವಿರುದ್ಧ ಜೆಡಿಎಸ್ ಕಿಡಿ

Public TV
2 Min Read
Dr Manjunath DK Suresh

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬೆಂಗಳೂರು ಗ್ರಾಮಾಂತರಕ್ಕೆ ಡಾ. ಮಂಜುನಾಥ್ (Dr.C.N Manjunath) ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ನೇಮಿಸಿದ ಹಿನ್ನೆಲೆ ಮಂಜುನಾಥ್ ಅವರ ಪರ ಜೆಡಿಎಸ್ (JDS) ಅಖಾಡಕ್ಕೆ ಇಳಿದಿದೆ.

ಈ ಕುರಿತು ಜೆಡಿಎಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಡಾ.ಮಂಜುನಾಥ್ ಹಾಗೂ ಡಿಕೆ ಸುರೇಶ್ (DK Suresh) ನಡುವಿನ ವ್ಯತ್ಯಾಸದ ಬಗ್ಗೆ ಟ್ವೀಟ್ ಮಾಡಿದೆ. ಎಕ್ಸ್ ಮೂಲಕ ಡಾ. ಮಂಜುನಾಥ್ ಎಂದರೇನು? ಡಿಕೆ ಸುರೇಶ್ ಎಂದರೇನು ಎಂದು ಜೆಡಿಎಸ್ ತಿಳಿಸಿದೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಿ – ಜೆಡಿಎಸ್‌ ನಾಯಕರಿಗೆ ಹೆಚ್‌ಡಿಡಿ ಕರೆ

ಟ್ವೀಟ್‌ನಲ್ಲಿ ಏನಿದೆ?
ನಿಸ್ವಾರ್ಥ v/s ಸ್ವಾರ್ಥ
ಸೇವೆ v/s ಸುಲಿಗೆ
ಒಳಿತು v/s ಕೆಡುಕು

ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ. ಡಿ.ಕೆ.ಸುರೇಶ್ ಅವರೇ ನೀವೇನು? ಡಾ.ಸಿ.ಎನ್.ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ ಭಾರತ ದೇಶಕ್ಕೇ ಗೊತ್ತಿದೆ. ಅನಗತ್ಯವಾಗಿ ನಾಲಿಗೆ ಜಾರಿ ಗುಣ ಹಾಳು ಮಾಡಿಕೊಳ್ಳಬೇಡಿ. ಇದನ್ನೂ ಓದಿ: ಕಾಫಿನಾಡಲ್ಲಿ ವರ್ಷದ ಮೊದಲ ಮಳೆ – ಕಾದ ಕಾವಲಿಯಂತಾದ ನೆಲಕ್ಕೆ ತಂಪು ಸುರಿದ ವರುಣ

ಆರೋಗ್ಯ ಕ್ಷೇತ್ರದಲ್ಲಿ ಎಣೆ ಇಲ್ಲದಷ್ಟು ಸೇವೆ ಮಾಡಿ ಲಕ್ಷಾಂತರ ಬಡಜನರ ಹೃದಯದಲ್ಲಿ ನೆಲೆಸಿರುವ ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಅನಾರೋಗ್ಯಕರ ಅಪಪ್ರಚಾರದಲ್ಲಿ ನೀವು ನಿರತರಾಗಿದ್ದೀರಿ. ಸೋಲಿನ ದುಸ್ವಪ್ನದಿಂದ ನೀವು ಬಳಲುತ್ತಿರುವುದು ಸ್ಪಷ್ಟ. ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ನಿಮಗೆಲ್ಲಿದೆ? ಇಡೀ ಕಾಂಗ್ರೆಸ್ ನಿಮ್ಮ ಕಬಂಧಬಾಹುಗಲ್ಲಿ ಬಂಧಿಯಾಗಿದೆ. ಅಣ್ಣ ಡಿಸಿಎಂ, ತಮ್ಮ ಎಂಪಿ, ಸಹೋದರಿಯ ಗಂಡ ವಿಧಾನ ಪರಿಷತ್ ಸದಸ್ಯ, ಇನ್ನೊಬ್ಬರು ಕುಣಿಗಲ್ ಶಾಸಕ. ಇದನ್ನೂ ಓದಿ: ಕನ್ನಡದಲ್ಲಿ ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ ಸುಧಾಮೂರ್ತಿ

ಇದೇನು ಫ್ಯಾಮಿಲಿ ಪಾಲಿಟಿಕ್ಸೋ ಅಥವಾ ಫ್ಯಾಮಿಲಿ ಪ್ಯಾಕೇಜೋ? ನೀವು ಏನೆಂದು ಕರೀತೀರಿ ಡಿ.ಕೆ.ಸುರೇಶ್ ಅವರೇ? ಅಳಿಯ ಜಾಣ ಆಗೋದು ತಪ್ಪಲ್ಲ. ನಿಮ್ಮಂತೆ ಇನ್ನೊಬ್ಬರ ಜೀವನಕ್ಕೆ ಎರವಾಗೋದು ತಪ್ಪಲ್ಲವೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಚುನಾವಣಾ ಆಯೋಗದ ಆಯುಕ್ತರಾಗಿ ಇಬ್ಬರ ನೇಮಕ

Share This Article