ಸಿಹಿಯಾದ ಚಿಕ್ಕಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ. ಮಕ್ಕಳಿಂದ ಹಿಡಿದು ದೊಡ್ಡವರೂ ಸಹ ಇದನ್ನೂ ಇಷ್ಟಪಟ್ಟು ತಿನ್ನುವುದರಲ್ಲಿ ಅನುಮಾನವೇ ಇಲ್ಲ. ಎಳ್ಳು ಸೇವನೆ ನಮ್ಮ ಆರೋಗ್ಯ ಕಾಪಾಡುವಲ್ಲಿ ಸಹಾಯ ಮಾಡುತ್ತದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಎಳ್ಳು ಚಿಕ್ಕಿ ಯಾವ ರೀತಿ ಮಾಡಬಹುದು ಎಂಬುದನ್ನು ತಿಳಿಸಿಕೊಡುತ್ತೇವೆ. ಹಾಗಿದ್ರೆ ಇದನ್ನು ಯಾವ ರೀತಿ ತಯಾರಿಸಬಹುದು ಎಂಬುದನ್ನು ತಿಳಿದುಕೊಳ್ಳಿ. ಇದನ್ನೂ ಓದಿ: ಮನೆಯಲ್ಲೇ ಮಾಡ್ನೋಡಿ ಅಂಜೂರ, ಖರ್ಜೂರ ಬರ್ಫಿ
Advertisement
ಬೇಕಾಗುವ ಸಾಮಗ್ರಿಗಳು:
ಬಿಳಿ ಎಳ್ಳು – 1 ಕಪ್
ಪುಡಿ ಮಾಡಿದ ಬೆಲ್ಲ – 1 ಕಪ್
ನೀರು- ಸ್ವಲ್ಪ
ಸಿಲ್ವರ್ ಫಾಯಿಲ್
ತುಪ್ಪ – ಸ್ವಲ್ಪ
ಏಲಕ್ಕಿ ಪುಡಿ – ಕಾಲು ಚಮಚ
ಅಡುಗೆ ಸೋಡಾ – ಕಾಲು ಚಮಚ
Advertisement
Advertisement
ಮಾಡುವ ವಿಧಾನ:
* ಮೊದಲಿಗೆ ಒಂದು ಪ್ಯಾನ್ ಬಿಸಿಗಿಟ್ಟು ಅದಕ್ಕೆ ಎಳ್ಳನ್ನು ಹಾಕಿಕೊಂಡು 2 ನಿಮಿಷಗಳವರೆಗೆ ಫ್ರೈ ಮಾಡಿಕೊಂಡು ಬೇರೆ ಬೌಲ್‌ಗೆ ಹಾಕಿಟ್ಟುಕೊಳ್ಳಿ.
* ಬಳಿಕ ಅದೇ ಪ್ಯಾನ್‌ಗೆ ಬೆಲ್ಲ ಹಾಕಿಕೊಂಡು ಅದಕ್ಕೆ 2 ಚಮಚ ನೀರನ್ನು ಸೇರಿಸಿಕೊಳ್ಳಿ. ಬಳಿಕ ಅದನ್ನು ಮೀಡಿಯಮ್ ಉರಿಯಲ್ಲಿ ಬೆಲ್ಲವನ್ನು ಕರಗಿಸಿಕೊಳ್ಳಿ.
* ಬಳಿಕ ಕರಗಿಸಿದ ಬೆಲ್ಲಕ್ಕೆ ಒಂದು ಚಮಚ ತುಪ್ಪವನ್ನು ಹಾಕಿಕೊಂಡು ಅದಕ್ಕೆ ಏಲಕ್ಕಿ ಪುಡಿಯನ್ನು ಸೇರಿಸಿಕೊಂಡು ಬೆಲ್ಲದ ಪಾಕ ಕಂದು ಬಣ್ಣ ಆಗುವವರೆಗೆ ತಿರುವಿಕೊಳ್ಳಿ.
* ನಂತರ ಆ ಮಿಶ್ರಣಕ್ಕೆ ಕಾಲು ಚಮಚ ಅಡುಗೆ ಸೋಡಾವನ್ನು ಹಾಕಿ ಸ್ವಲ್ಪ ಫ್ರೈ ಮಾಡಿಕೊಂಡು ಎಳ್ಳನ್ನು ಸೇರಿಸಿಕೊಳ್ಳಿ.
* ಸಣ್ಣ ಉರಿಯಲ್ಲಿ 2ರಿಂದ ಮೂರು ನಿಮಿಷ ಈ ಮಿಶ್ರಣವನ್ನು ತಿರುವಿಕೊಳ್ಳಬೇಕು.
* ಈಗ ಒಂದು ಪ್ಲೇಟ್‌ಗೆ ಸಿಲ್ವರ್ ಫಾಯಿಲ್ ಅನ್ನು ಹಾಕಿಕೊಂಡು ಅದಕ್ಕೆ ತುಪ್ಪ ಹಚ್ಚಿಕೊಂಡು ಬೆಲ್ಲ ಮತ್ತು ಎಳ್ಳಿನ ಮಿಶ್ರಣವನ್ನು ಅದಕ್ಕೆ ವರ್ಗಾಯಿಸಿಕೊಳ್ಳಿ.
* ಈಗ ಅದನ್ನು ಸಮತಟ್ಟಾಗಿ ಪ್ಲೇಟ್‌ಗೆ ಹರಡಿಕೊಂಡು ಬಿಸಿಯಿರುವಾಗಲೇ ಚೌಕಾಕಾರದಲ್ಲಿ ಚಾಕುವಿನಿಂದ ತುಂಡರಿಸಿಕೊಳ್ಳಿ.
* ಬಳಿಕ ಇದನ್ನು ಅರ್ಧ ಗಂಟೆಗಳ ಕಾಲ ಹಾಗೆಯೇ ಬಿಡಿ. ಬಿಸಿ ಆರಿದ ಬಳಿಕ ಇದನ್ನು ತುಂಡು ತುಂಡಾಗಿ ಮುರಿದು ತಿನ್ನಲು ಕೊಡಿ. ಇದನ್ನೂ ಓದಿ: ಕಬಾಬ್ ಪೌಡರ್ ಇಲ್ಲದೇ ಸೋಯಾ ಕಬಾಬ್ ಮಾಡಿ
Advertisement
Web Stories