ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ.ರಘುಮೂರ್ತಿ (T.Raghumoorthy) ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ (ಆ.17) ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಚಿವರು, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: BWF World Championships| ವಿಶ್ವ ನಂ. 1 ಆಟಗಾರನನ್ನು ಸೋಲಿಸಿ ಇತಿಹಾಸ ಬರೆದ ಆಯುಷ್ ಶೆಟ್ಟಿ
ಸಭೆಯಲ್ಲಿ ಮಾತನಾಡಿದ ಸಚಿವ ರಘುಮೂರ್ತಿ ಅವರು, ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾವ ಯೋಜನೆಗಳು ಯಾವ ಹಂತದಲ್ಲಿದೆ? ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು ನೇರವಾಗಿ ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿರುವುದರಿಂದ ಅವುಗಳ ಅನುಷ್ಠಾನದಲ್ಲಿ ವಿಳಂಬವಾಗಬಾರದು. ಬಾಕಿ ಇರುವ ಯೋಜನೆಗಳನ್ನು ಗುರುತಿಸಿ, ಅವುಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿ, ಸಭೆಯಲ್ಲಿ ಸ್ಪಷ್ಟಪಡಿಸಿದರು.ಇದನ್ನೂ ಓದಿ: ಹಿಂದುಳಿದ ವರ್ಗಗಳಿಗೆ ಈ ಜವಾಬ್ದಾರಿ ಸಿಕ್ಕಿರುವುದು ಸಂತಸ ತಂದಿದೆ: ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಎಂ.ನಾಗರಾಜ್
ವಿಶೇಷವಾಗಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ಶಿಕ್ಷಣ, ವಸತಿ, ಆರ್ಥಿಕ ಸಬಲೀಕರಣ, ಮೂಲಸೌಕರ್ಯ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ ಅವುಗಳ ಅನುಷ್ಠಾನದಲ್ಲಿ ಸಮನ್ವಯ ಮತ್ತು ವೇಗ ಅಗತ್ಯ ಎಂದರು. ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಘಂಟಿ, ಇಲಾಖೆಯ ನಿರ್ದೇಶಕ ಅಶೋಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ಇದನ್ನೂ ಓದಿ: ವಂದೇ ಮಾತರಂ ಹಾಡಲ್ಲ ಗೌರವಿಸುತ್ತೇನೆ, ಅಲ್ಲಾನನ್ನು ಬಿಟ್ಟರೆ ಯಾರನ್ನು ಪೂಜಿಸಲ್ಲ: ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್
