ಉಸ್ತಾದ್ ರಾಮ್ ಪೋತಿನೇನಿ (Ustad Ram Pothineni) ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ (Puri Jagannath) ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು ಹೈದ್ರಾಬಾದ್ ನಲ್ಲಿ ಸಿನಿಮಾದ ಮುಹೂರ್ತ (Muhurta) ಸಮಾರಂಭ ನೆರವೇರಿಸಲಾಗಿದೆ. ಚಾರ್ಮಿ (Charmy) ಡಬಲ್ ಇಸ್ಮಾರ್ಟ್ ಸಿನಿಮಾಗೆ ಕ್ಲಾಪ್ ಮಾಡಿದರೆ, ನಿರ್ದೇಶಕ ಪುರಿ ಜಗನ್ನಾಥ್ ಮೊದಲ ಶಾಟ್ ಗೆ ಆಕ್ಷನ್ ಕಟ್ ಹೇಳಿದರು.
ಡಬಲ್ ಮಾಸ್ (Double Smart) ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಇದೇ ತಿಂಗಳ 12ರಿಂದ ಶುರುವಾಗಲಿದೆ. ಸತತ ಚಿತ್ರೀಕರಣದ ನಂತರ ಮುಂದಿನ ವರ್ಷ ಅಂದ್ರೆ 2024 ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ. ರಿಲೀಸ್ ಡೇಟ್ ಬಹಿರಂಗ ಪಡಿಸಿಯೇ ಶೂಟಿಂಗ್ ಶುರು ಮಾಡುತ್ತಿದೆ ಚಿತ್ರತಂಡ. ಇದನ್ನೂ ಓದಿ:ಕನ್ನಡದಲ್ಲಿ ಮಾತನಾಡಿದ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ
ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ನಡಿ ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.
ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.
Web Stories