ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಇದೀಗ ಬುಡಕಟ್ಟು ಮುಖಂಡ ಮಹೇಂದ್ರಜೀತ್ ಸಿಂಗ್ ಮಾಳವಿಯಾ (Mahendrajeet Singh Malviya) ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Advertisement
ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ನಾಲ್ಕು ಬಾರಿ ಶಾಸಕರು ಹಾಗೂ ಮಾಜಿ ಸಚಿವರೂ ಆಗಿರುವ ಮಾಳವಿಯಾ ಇಂದು ಕೈ ಬಿಟ್ಟು ಕಮಲ ಮುಡಿದಿದ್ದಾರೆ. ಇವರನ್ನು ಪಕ್ಷದ ರಾಜಸ್ಥಾನ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಮುಖ್ಯಸ್ಥ ಸಿ.ಪಿ ಜೋಶಿ ಮತ್ತು ಇತರ ಪ್ರಮುಖ ನಾಯಕರು ಪಕ್ಷಕ್ಕೆ ಸ್ವಾಗತಿಸಿದರು. ಇದನ್ನೂ ಓದಿ: NDA ಸೇರುತ್ತಾರಾ ನವನಿರ್ಮಾಣ ಸೇನೆಯ ರಾಜ್ ಠಾಕ್ರೆ?
Advertisement
Advertisement
2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ಮಹೇಂದ್ರಜೀತ್ ಸಿಂಗ್ ಮಾಳವಿಯಾ ಅವರು ವಿರೋಧ ಪಕ್ಷದ ನಾಯಕರಾಗಿ ನೇಮಕಗೊಳ್ಳದೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
Advertisement
ಬಿಜೆಪಿ ಸೇರಿದ ಬಳಿಕ ಮಾತನಾಡಿದ ಅವರು, ವಾಗಡ್ ಪ್ರದೇಶದ ಅಭಿವೃದ್ಧಿಯೇ ನಾನು ಬಿಜೆಪಿ ಸೇರಲು ಕಾರಣವಾಗಿದೆ. ಈ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯವಾಗುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ದೂರದೃಷ್ಟಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.