ಧಾರವಾಡ: ಕನ್ನೇರಿ ಮಠದ (Kaneri Math) ಕಾಡಸಿದ್ದೇಶ್ವರ ಶ್ರೀಗಳಿಗೆ ಧಾರವಾಡ (Dharawada) ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ಧಾರವಾಡ ಹೈಕೋರ್ಟ್ ಪೀಠ (Dharwada High Court) ತೆರವು ಮಾಡಿದೆ.
ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ಇದೇ ತಿಂಗಳ ನವೆಂಬರ್ 5 ರಿಂದ 7 ರವರೆಗೆ ಕನ್ನೇರಿ ಶ್ರೀಗಳ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆದರೆ ಸ್ವಾಮೀಜಿ ಧಾರವಾಡ ಜಿಲ್ಲೆಗೆ ಆಗಮಿಸದಂತೆ ಜಿಲ್ಲಾಡಳಿತ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಕನ್ನೇರಿ ಸ್ವಾಮೀಜಿ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ನವೆಂಬರ್ 19 ರಂದು ವಾದ ಪ್ರತಿವಾದ ಆಲಿಸಿದ್ದ ಧಾರವಾಡ ಹೈಕೋರ್ಟ್ ಪೀಠ, ತಡೆಯಾಜ್ಞೆ ತೆರವು ಮಾಡಿ ಇಂದು ಆದೇಶ ಮಾಡಿದೆ. ನವೆಂಬರ್ 4 ರಂದೇ ಸ್ವಾಮೀಜಿ ಕಾರ್ಯಕ್ರಮಕ್ಕೆ ತಡೆ ನೀಡಿದ್ದ ಧಾರವಾಡ ಜಿಲ್ಲಾಡಳಿತದ ಆದೇಶವು ರಾಜಕೀಯ ಪ್ರೆರೀತವಾಗಿದೆ ಎಂದು ಅಭಿಪ್ರಾಯ ಪಟ್ಟಿದೆ. ಇದನ್ನೂ ಓದಿ: Haveri | ಮೆಕ್ಕೆಜೋಳಕ್ಕೆ 3,000 ರೂ. ದರ ನೀಡುವಂತೆ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ
ನವೆಂಬರ್ 5, 6 ಮತ್ತು 7 ರಂದು ಧಾರವಾಡ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕನ್ನೇರಿ ಶ್ರೀಗಳು ಪಾಲ್ಗೊಳ್ಳಬೇಕಿತ್ತು. ಆದರೆ ಲಿಂಗಾಯತ ಸಮುದಾಯಕ್ಕೆ ಅವ್ಯಾಚ್ಯವ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿಗೆ ಮನವಿ ನೀಡಲಾಗಿತ್ತು. ಈ ಮನವಿ ಪರಿಶೀಲಿಸಿದ ಕನೇರಿ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ಆಗಮಿಸಲು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ನೀಡಿದ್ದರು.

