ಬೆಂಗಳೂರು/ಆನೇಕಲ್: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.
ಜಿಗಣಿ ಪೊಲೀಸ್ ಠಾಣೆ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಮಂಜುನಾಥ್ ರೆಡ್ಡಿ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ಇದ್ದ ಉತ್ತರ ಭಾರತ ಮೂಲದ ಏಳು ಕಾರ್ಮಿಕರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ನಟಿ ಆಥಿಯಾ ಶೆಟ್ಟಿ ಜೊತೆಗಿನ ಡೇಟಿಂಗ್ ಗಾಸಿಪ್‌ಗೆ ಬ್ರೇಕ್ ಹಾಕಿದ ರಾಹುಲ್
ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು, ಮನೆ ಬೆಂಕಿಯಿಂದ ಹೊತ್ತಿ ಉರಿದಿದೆ. ಘಟನೆಯಲ್ಲಿ ಕಾರ್ಮಿಕರಾದ ಜಗದೀಶ್ ಶಾಂತಿಬೈ, ಪ್ರಕಾಶ್, ಕಾಡು, ಜೈಮುಲ್, ಮಂಜು, ವಲ್ಲಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಇದೀಗ ಅವರನ್ನು ಜಿಗಣಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಸಿಹಿ ನೆನಪುಗಳನ್ನು ಮೆಲುಕು ಹಾಕುತ್ತಿರುವ ಶಿವಣ್ಣ, ರಾಘಣ್ಣ