ಜೆರುಸಲೇಂ: ಇಸ್ರೇಲ್ (Israel) ಪಡೆಗಳು ಪಶ್ಚಿಮ ದಂಡೆಯಲ್ಲಿ ಕಾರ್ಯಾಚರಣೆ ನಡೆಸಿ 10 ಮಂದಿ ಪ್ಯಾಲೆಸ್ಟೀನಿಯನ್ನರನ್ನ (Palestinians )ಹತ್ಯೆ ಮಾಡಿದ ಬೆನ್ನಲ್ಲೇ ಇಸ್ರೇಲ್‌ನಲ್ಲಿ ಭಯೋತ್ಪಾದಕ (Terror Attack) ಗುಂಡಿನ ದಾಳಿ (Shoot out) ನಡೆದಿದೆ.
ಇಸ್ರೇಲ್ ಜೆರುಸಲೇಮ್‌ನ (Jerusalem) ಹೊರವಲಯದಲ್ಲಿರುವ ಸಿನಗಾಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ (Israel’s Foreign Ministry) ತಿಳಿಸಿದೆ. 70 ವರ್ಷದ ಮಹಿಳೆ ಸೇರಿದಂತೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಆರ್ಥಿಕ, ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕ್‌ಗೆ ಮತ್ತೊಂದು ಸಂಕಷ್ಟ – ನಿಗೂಢ ಕಾಯಿಲೆಗೆ 18 ಸಾವು
Advertisement
Advertisement
ಇಸ್ರೇಲ್ ಪೊಲೀಸರು, ಇದನ್ನು `ಭಯೋತ್ಪಾದಕ ದಾಳಿ’ ಎಂದು ಖಚಿತಪಡಿಸಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಪ್ಯಾಲೆಸ್ಟೀನಿಯ ಇಸ್ಲಾಮಿಕ್ ಜಿಹಾದ್ ಸಂಘಟನೆ ಹೊಗಳಿದೆ. ಆದರೆ ದಾಳಿ ಮಾಡಿರುವ ಹೊಣೆಯನ್ನು ತಳ್ಳಿಹಾಕಿದೆ. ಇದನ್ನೂ ಓದಿ: ಗುಂಡಿನ ದಾಳಿ ನಡೆಸಿ 10 ಪ್ಯಾಲೆಸ್ಟೀನಿಯನ್ನರ ಹತ್ಯೆಗೈದ ಇಸ್ರೇಲ್ ಪಡೆ
Advertisement
ಪರಸ್ಪರ ರಾಕೆಟ್ ದಾಳಿ: ಇಸ್ರೇಲ್ ಸೇನೆ ಮತ್ತು ಪ್ಯಾಲೆಸ್ಟೀನ್ ಉಗ್ರರ ಗುಂಪುಗಳ ನಡುವೆ ಗಾಜಾಪಟ್ಟಿಯಲ್ಲಿ ಪರಸ್ಪರ ಕ್ಷಿಪಣಿ, ರಾಕೆಟ್ ದಾಳಿ ನಡೆದಿದ್ದು, ಕ್ಷಿಪಣಿ, ಗುಂಡಿನ ದಾಳಿಯಲ್ಲಿ 61 ವರ್ಷದ ಮಹಿಳೆ, ಕನಿಷ್ಠ ಏಳು ಮಂದಿ ಉಗ್ರರು ಅಸುನೀಗಿದ್ದಾರೆ. ಈ ಬೆಳವಣಿಗೆ ಜೆರುಸಲೇಂನ ನಿವಾಸಿಗಳಲ್ಲಿ ಆತಂಕವನ್ನು ಮೂಡಿಸಿದೆ. ಪ್ಯಾಲೆಸ್ಟೀನ್ ಉಗ್ರರ ಗುಂಪು ರಾಕೆಟ್ ದಾಳಿಯನ್ನು ನಿಲ್ಲಿಸಿದಲ್ಲಿ ಪ್ರತಿಯಾಗಿ ಸೇನೆ ಕೂಡಾ ವಾಯುದಾಳಿಯನ್ನು ಸ್ಥಗಿತಗೊಳಿಸಲಿದೆ ಎಂದು ಇಸ್ರೇಲ್‌ನ ರಕ್ಷಣಾ ಸಚಿವರು ಸುಳಿವು ನೀಡಿದ್ದಾರೆ.
Advertisement
ಇಸ್ರೇಲ್ ಮತ್ತು ಪ್ಯಾಲೆಸ್ಟೀನ್‌ನ ನಡುವೆ ದಶಕಗಳಿಂದಲೂ ಸಂಘರ್ಷದ ಸ್ಥಿತಿ ಇದೆ. ಇತ್ತೀಚೆಗೆ ಮರು ಆಯ್ಕೆಗೊಂಡಿರುವ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರಿಗೆ ಇದು ಅಗ್ನಿಪರೀಕ್ಷೆಯಾಗಿದೆ. ಪ್ಯಾಲೆಸ್ಟೀನ್ ಉಗ್ರರು ಗಾಜಾದಿಂದ ಇಸ್ರೇಲ್‌ನ ದಕ್ಷಿಣ ಭಾಗವನ್ನು ಗುರಿಯಾಗಿಸಿ ರಾಕೆಟ್ ದಾಳಿ ನಡೆಸಿದರೆ ಪ್ರತಿಯಾಗಿ ಇಸ್ರೆಲ್ ಸೇನೆಯು ಗಾಜಾದಲ್ಲಿರುವ ತರಬೇತಿ ಶಿಬಿರ, ರಾಕೆಟ್ ತಯಾರಿಕಾ ಘಟಕವನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ ಎಂದಿದ್ದಾರೆ.
ಇತ್ತೀಚೆಗೆ ಅಮೆರಿಕದ ಕ್ಯಾಲಿಫೋರ್ನಿಯಾ ಹಾಗೂ ವಾಷಿಂಗ್ಟನ್ ರಾಜ್ಯದ ಯಾಕಿಮಾ ನಗರದಲ್ಲಿ ಗುಂಡಿನ ದಾಳಿಗೆ 14 ಮಂದಿ ಬಲಿಯಾಗಿದ್ದರು. ನಂತರ ಇಸ್ರೇಲ್‌ನಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ 10 ಮಂದಿ ಪ್ಯಾಲೆಸ್ಟೇನಿಯರನ್ನ ಗುಂಡಿಕ್ಕಿ ಕೊಲ್ಲಲಾಗಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k