ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಮೇಲೆ ಬಾಂಬ್‌ ಸ್ಫೋಟ – 7 ಮಂದಿ ದುರ್ಮರಣ

Public TV
1 Min Read
Pak Bomb Blast

ಇಸ್ಲಾಮಾಬಾದ್: ಒಂದೆಡೆ ಭಾರತದ ಮೇಲೆ ಯುದ್ಧಕ್ಕೆ ಹಪಹಪಿಸುತ್ತಿರುವ ಪಾಕಿಸ್ತಾನಕ್ಕೆ (Pakistan) ತನ್ನ ದೇಶದಲ್ಲೇ ಸುರಕ್ಷತೆ ಇಲ್ಲದಂತಾಗಿದೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (Khyber Pakhtunkhwa) ಪ್ರಾಂತ್ಯದಲ್ಲಿರುವ ಶಾಂತಿ ಸಮಿತಿಯ ಕಚೇರಿಯ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Pakistan

ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಧಾನ ಕಚೇರಿಯಾದ ವಾನಾದಲ್ಲಿರುವ ಸ್ಥಳೀಯ ಶಾಂತಿ ಸಮಿತಿಯ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಚೇರಿಯೇ ಧ್ವಂಸವಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ 16 ಮಂದಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು!

ಸದ್ಯ ಈವರೆಗೆ ಯಾವುದೇ ಗುಂಪು ಬಾಂಬ್‌ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ. ಮಾಹಿತಿ ಪಡೆದ ಬಳಿಕ ಸ್ಥಳೀಯ ರಕ್ಷಣಾ ಪಡೆಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇನ್ನೂ ಅವಶೇಷಗಳ ಅಡಿ ಜನ ಸಿಲುಕಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: US ಆಯ್ತು! ಈಗ ಆಸ್ಟ್ರೇಲಿಯಾ ವಿವಿಗಳಿಂದ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ಬಂದ್.. ಯಾಕೆ?

ಸದ್ಯ ಆರ್ಥಿಕವಾಗಿ ಈಗಾಗಲೇ ತತ್ತರಿಸಿ ಹೋಗಿರುವ ಪಾಕಿಸ್ತಾನದ ಮೇಲೆ ಒಂದು ಕಡೆಯಿಂದ ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೊಂದು ಕಡೆಯಿಂದ ತಾಲಿಬಾನ್‌ ಕಡೆಯಿಂದ ದಾಳಿ ನಡೆಯುತ್ತಿದೆ. ಬಲೂಚಿಸ್ತಾನ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ – ಬಲೂಚಿಸ್ತಾನ ಲಿಬರೇಷನ್ ಆರ್ಮಿ ಬಂಡುಕೋರರು ಸೇನೆಯನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸುತ್ತಲೇ ಇದ್ದಾರೆ. ಇದರಿಂದ ಭಾರೀ ಸಂಖ್ಯೆಯಲ್ಲಿ ಸೈನಿಕರು ಮೃತಪಟ್ಟಿದ್ದು, ಸಾಮೂಹಿಕ ರಾಜೀನಾಮೆಗೆ ಮುಂದಾಗುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಭಾರತ – ಪಾಕ್‌ ನಡುವೆ ಉದ್ವಿಗ್ನತೆ ಮೇಲೆ ಚೀನಾ ನಿಗಾ – ಪಾಕಿಸ್ತಾನದ ಈ ಬೇಡಿಕೆಗೆ ಬೆಂಬಲ 

Share This Article