ರಾಯ್ಪುರ್: ಛತ್ತೀಸ್‍ಗಢ ರಾಜ್ಯದ ರಜ್ನಂದ್‍ಗಾಂವ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಏಳು ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ.
ಇಂದು ಬೆಳಗ್ಗೆ ಸುಮಾರು 6 ಗಂಟೆಗೆ ಸಿತ್ಗೋಟ ಗ್ರಾಮದ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಗುಂಡಿನ ಚಕಮಕಿ 7 ಮಾವೋವಾದಿಗಳನ್ನು ಹೊಡೆದುರುಳಿಸುವಲ್ಲಿ ಭದ್ರತಾ ಸಿಬ್ಬಂದಿ ಯಶಶ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಇಂದು ಬೆಳಗ್ಗೆ ಸಿತ್ಗೋಟಾ ಗ್ರಾಮದ ಬಘ್ನದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಜಿಲ್ಲಾ ಭದ್ರತಾ ಮೀಸಲು ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 7 ಜನ ಮವೋವಾದಿಗಳು ಸಾವನ್ನಪ್ಪಿದ್ದಾರೆ. ಮಾವೋವಾದಿಗಳು ಅಡಗಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ನಕ್ಸಲ್ ವಿರೋಧಿ ಕಾರ್ಯಾಚರಣೆಯ ಡೆಪ್ಯೂಟಿ ಇನ್ಸ್‍ಪೆಕ್ಟರ್ ಜನರಲ್ ಪಿ.ಸುಂದರ್‍ರಾಜ್ ತಿಳಿಸಿದ್ದಾರೆ.
Advertisement
ಈವರೆಗೆ ಏಳು ಜನರ ಶವಗಳು, ಒಂದು ಎಕೆ-47 ಗನ್ ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳು ಸ್ಥಳದಲ್ಲಿ ಪತ್ತೆಯಾಗಿವೆ. ಘಟನೆ ನಡೆದ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಕಾರ್ಯಾಚರಣೆ ಪೂರ್ಣಗೊಂಡ ನಂತರ ಸಂಪೂರ್ಣ ಮಾಹಿತಿ ದೊರೆಯಲಿದೆ ಎಂದು ಸುಂದರ್‍ರಾಜ್ ಹೇಳಿದ್ದಾರೆ.