ಚೆನ್ನೈ: ಮುಂದಿನ ಮೂರು ಗಂಟೆಗಳಲ್ಲಿ ತಮಿಳುನಾಡಿನ ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Tamil Nadu | Streets severely waterlogged in Kodambakkam and Ashok Nagar areas of Chennai due to heavy rainfall pic.twitter.com/WGxyC45T1B
— ANI (@ANI) November 11, 2021
Advertisement
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯುವ ನಿರೀಕ್ಷೆ ಇದೆ. ನವೆಂಬರ್ 11 ರ ಸಂಜೆಯ ವೇಳೆಗೆ ಹವಾಮಾನ ವ್ಯವಸ್ಥೆಯು ಉತ್ತರ ತಮಿಳುನಾಡು ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಕಾರೈಕಲ್ ಮತ್ತು ಶ್ರೀಹರಿಕೋಟಾ ನಡುವಿನ ಪುದುಚೇರಿಯನ್ನು ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಅಪ್ಪು ನಟನೆಯ ಚಿತ್ರದ ಶೀರ್ಷಿಕೆಗಳಲ್ಲೇ ಗೀತೆ ರಚನೆ ಮಾಡಿದ ತಂದೆ, ಜೀವ ತುಂಬಿದ ಮಗಳು
Advertisement
#WATCH Areas in Chennai’s Ashok Nagar remain inundated as rainfall continues to lash the city.
As per the Met Department, Chennai is expected to receive heavy rainfall today. #TamilNadu pic.twitter.com/0iyNoVfnrY
— ANI (@ANI) November 11, 2021
Advertisement
ತಮಿಳುನಾಡಿನ ಕಡಲೂರು, ಕಲ್ಲಕುರಿಚಿ, ವಿಲ್ಲುಪುರಂ, ರಾಣಿಪೇಟ್, ವೆಲ್ಲೂರು, ತಿರುವಣ್ಣಾಮಲೈ, ಕನ್ಯಾಕುಮಾರಿ, ತಿರುನೆಲ್ವೇಲಿ ಮತ್ತು ಥೆಂಕಾಸಿ ಜಿಲ್ಲೆಗಳಲ್ಲಿ ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಈ ಮುನ್ನ ಬುಧವಾರ ಸಹ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ಈ ಕುರಿತಂತೆ ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್‍ಎಸ್‍ಆರ್ ರಾಮಚಂದ್ರನ್ ಅವರು ರಾಜ್ಯದಲ್ಲಿ ಸುರಿದ ಮಳೆಯಿಂದಾಗಿ ಸಾವಿನ ಸಂಖ್ಯೆ 12 ಏರಿಕೆಯಾಗಿದೆ ಎಂದು ಮಾಹಿತಿ ನೀಡಿದ್ದರು.
Advertisement
Tamil Nadu | Tree clearing operation underway in Chennai’s Kodambakkam area even as rain continues to lash the city pic.twitter.com/XUz0f66t9R
— ANI (@ANI) November 11, 2021
ಇನ್ನೂ ಮೋಡಗಳಿರುವ ಕಾರಣ ಚೆನ್ನೈನಿಂದ ಪೂರ್ವ-ಆಗ್ನೇಯಕ್ಕೆ 430 ಕಿಲೋಮೀಟರ್ ಮತ್ತು ಪುದುಚೇರಿಯ ಪೂರ್ವ-ಆಗ್ನೇಯಕ್ಕೆ 420 ಕಿಮೀ ದೂರದಲ್ಲಿದ್ದು ಇದು ನವೆಂಬರ್ 11 ರ ಮುಂಜಾನೆ ಪಶ್ಚಿಮ ವಾಯವ್ಯ ದಿಕ್ಕಿನಲ್ಲಿ ಚಲಿಸಿ ಮತ್ತು ಉತ್ತರ ತಮಿಳುನಾಡು ಕರಾವಳಿಯ ಬಳಿ ತಲುಪುವ ಸಾಧ್ಯತೆಯಿದೆ. ನಂತರ ನವೆಂಬರ್ 11 ರ ಸಂಜೆಯ ವೇಳೆಗೆ ಇದು ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕಾನ್ಪುರದಲ್ಲಿ ಝಿಕಾ ವೈರಸ್ ಪತ್ತೆ – ಮತ್ತೆ 3 ಪ್ರಕರಣ, ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆ
#WATCH Rainwater enters ESI Hospital located in Chennai’s KK Nagar
All facilities including OPDs are operational here with the available manpower. The hospital wards including COVID19 wards are not affected, says Dr Mahesh of ESI hospital pic.twitter.com/WsWPtgG3Bc
— ANI (@ANI) November 11, 2021
ಹವಾಮಾನ ಮುನ್ಸೂಚನೆಯ ಹಿನ್ನೆಲ್ಲೇ ನವೆಂಬರ್ 11 ರಂದು ಚೆನ್ನೈ ಸೇರಿದಂತೆ ತಮಿಳುನಾಡಿನ 20 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆ ಬೆನ್ನಲ್ಲೇ ತಮಿಳುನಾಡು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಟಿಎನ್‍ಎಸ್‍ಡಿಎಂಎ) ತೂತುಕುಡಿ, ವಿಲ್ಲಿಪುರಂ, ತಿರುನೆಲ್ವೇಲಿ, ನಾಗಪಟ್ಟಿಣಂ, ಕಡಲೂರು ಮತ್ತು ಚೆಂಗಲ್‍ಪೆಟ್ಟು ಜಿಲ್ಲೆಗಳಲ್ಲಿ ಪ್ರವಾಹ ಎಚ್ಚರಿಕೆ ನೀಡಿದೆ.
#WATCH Chennai’s popular Marina beach flooded due to heavy downpour as a result of cyclonic circulation in the Bay of Bengal#TamilNadu pic.twitter.com/L6N4iIhj1u
— ANI (@ANI) November 11, 2021
ಹವಾಮಾನ ಇಲಾಖೆಯ ಸಲಹೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ನವೆಂಬರ್ 11 ರಂದು ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗೆಲ್‍ಪೇಟ್, ಕಡಲೂರು, ನಾಗಪಟ್ಟಿಣಂ, ತಂಜಾವೂರು, ತಿರುವರೂರು ಮತ್ತು ಮೈಲಾಡುತುರೈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಇದನ್ನೂ ಓದಿ: ಯಮುನಾ ನದಿಯಲ್ಲಿ ವಿಷಕಾರಿ ನೊರೆ – ಜನರಲ್ಲಿ ಆತಂಕ
Heavy rainfall affects normal life in Puducherry, streets remain inundated pic.twitter.com/o8sO4WYxsH
— ANI (@ANI) November 11, 2021
ಹವಾಮಾನ ವೈಪರೀತ್ಯದಿಂದಾಗಿ ಚೆನ್ನೈಗೆ ಆಗಮಿಸುವ ಮತ್ತು ಚೆನ್ನೈನಿಂದ ಹೊರಡುವ ನಾಲ್ಕು ವಿಮಾನಗಳನ್ನು ಬುಧವಾರ ರದ್ದುಗೊಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ, 530 ಮನೆಗಳಿಗೆ ಹಾನಿಯಾಗಿದೆ ಮತ್ತು 1,700 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.