ನವದೆಹಲಿ: ಸಿಯಾಚಿನ್‍ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಹಿಮಪಾತದಲ್ಲಿ ಸುಮಾರು 8ಕ್ಕೂ ಹೆಚ್ಚು ಯೋಧರು ಸಿಲುಕಿದ್ದಾರೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.
ಯೋಧರು ಎಂದಿನಂತೆ ಗಸ್ತಿನಲ್ಲಿದ್ದಾಗ ಈ ಅವಘಡ ಸಂಭವಿಸಿದ್ದು, ಸೋಮವಾರ ಮಧ್ಯಾಹ್ನ 3.30ರ ವೇಳೆಗೆ ಘಟನೆ ನಡೆದಿದೆ. ಸದ್ಯ ಸೈನಿಕರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಹಿಮದಡಿ ಸಿಲುಕಿದ ಯೋಧರಿಗಾಗಿ ಶೋಧ ಕಾರ್ಯ ಶುರುವಾಗಿದೆ.
Advertisement
Army Sources: The avalanche had hit the Army positions in the northern glacier at around 3.30 pm today. #Siachen https://t.co/W1K4mQkPw7
— ANI (@ANI) November 18, 2019
Advertisement
2016ರಲ್ಲೂ ಹೀಗೆಯೇ ಆಗಿತ್ತು!: 2016ರಲ್ಲಿ ಸಿಯಾಚಿನ್‍ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ವೀರಯೋಧ ಹನುಮಂತಪ್ಪ ಕೊಪ್ಪದ್ 6 ದಿನಗಳ ಬಳಿಕ ಪತ್ತೆಯಾಗಿದ್ದರು. ಅವರನ್ನು ಜೀವಂತವಾಗಿ ಪತ್ತೆ ಮಾಡಿದ್ದರೂ ಬಹು ಅಂಗಾಂಗ ವೈಫಲ್ಯದಿಂದ ಅವರು ವೀರ ಮರಣ ಹೊಂದಿದ್ದರು. ಸಾವಿಗೆ ಸವಾಲೊಡ್ಡಿ ಮಂಜುಗಡ್ಡೆಗಳ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದ ವೀರಯೋಧ ಹನುಮಂತಪ್ಪ ಅವರಿಗೆ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
Advertisement
Army Sources: The Army personnel hit by the avalanche were part of a patrolling party consisting eight persons and were in the northern glacier when the incident happened. #Siachen
— ANI (@ANI) November 18, 2019