Wednesday, 29th January 2020

ಸಿಯಾಚಿನ್‍ನಲ್ಲಿ ಭಾರೀ ಹಿಮಪಾತ – ಹಿಮದೊಳಗೆ ಸಿಲುಕಿದ ಸೈನಿಕರು

ನವದೆಹಲಿ: ಸಿಯಾಚಿನ್‍ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಹಿಮಪಾತದಲ್ಲಿ ಸುಮಾರು 8ಕ್ಕೂ ಹೆಚ್ಚು ಯೋಧರು ಸಿಲುಕಿದ್ದಾರೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.

ಯೋಧರು ಎಂದಿನಂತೆ ಗಸ್ತಿನಲ್ಲಿದ್ದಾಗ ಈ ಅವಘಡ ಸಂಭವಿಸಿದ್ದು, ಸೋಮವಾರ ಮಧ್ಯಾಹ್ನ 3.30ರ ವೇಳೆಗೆ ಘಟನೆ ನಡೆದಿದೆ. ಸದ್ಯ ಸೈನಿಕರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಹಿಮದಡಿ ಸಿಲುಕಿದ ಯೋಧರಿಗಾಗಿ ಶೋಧ ಕಾರ್ಯ ಶುರುವಾಗಿದೆ.

2016ರಲ್ಲೂ ಹೀಗೆಯೇ ಆಗಿತ್ತು!: 2016ರಲ್ಲಿ ಸಿಯಾಚಿನ್‍ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ವೀರಯೋಧ ಹನುಮಂತಪ್ಪ ಕೊಪ್ಪದ್ 6 ದಿನಗಳ ಬಳಿಕ ಪತ್ತೆಯಾಗಿದ್ದರು. ಅವರನ್ನು ಜೀವಂತವಾಗಿ ಪತ್ತೆ ಮಾಡಿದ್ದರೂ ಬಹು ಅಂಗಾಂಗ ವೈಫಲ್ಯದಿಂದ ಅವರು ವೀರ ಮರಣ ಹೊಂದಿದ್ದರು. ಸಾವಿಗೆ ಸವಾಲೊಡ್ಡಿ ಮಂಜುಗಡ್ಡೆಗಳ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದ ವೀರಯೋಧ ಹನುಮಂತಪ್ಪ ಅವರಿಗೆ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Leave a Reply

Your email address will not be published. Required fields are marked *