ಬೆಂಗಳೂರು: ಸಿದ್ದಗಂಗಾ ಶ್ರೀಗಳ ಲಿಂಗೈಕ್ಯ ಹಿನ್ನೆಲೆಯಲ್ಲಿ ಮಂಗಳವಾರ ಸರ್ಕಾರ ರಜೆಯನ್ನು ಘೋಷಣೆ ಮಾಡಿದೆ. ಹೀಗಾಗಿ ನಾಳೆ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಾಳೆ ನಡೆಯಬೇಕಿದ್ದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ ಎಂದು ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಇತ್ತ ಪಿಯು ಪೂರಕ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ಪಿಯು ಬೋರ್ಡ್ ಪ್ರಕಟಣೆ ಹೊರಡಿಸಿದೆ. ಬದಲಾದ ಪರೀಕ್ಷೆ ದಿನಾಂಕ ಆಯಾ ವಿಶ್ವವಿದ್ಯಾಲಯದ ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗಿದೆ.
Advertisement
Advertisement
ಇತ್ತ ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತಾದಿಗಳಿಗೆ ವಿಶೇಷ ರೈಲು ಸೌಲಭ್ಯವನ್ನು ಕಲ್ಪಿಸಲಾಗಿದೆ. ಬೆಂಗಳೂರು-ತುಮಕೂರು ನಗರಗಳ ನಡುವೆ ವಿಶೇಷ ರೈಲು ವ್ಯವಸ್ಥೆ ಇರಲಿದೆ. ಯಶವಂತಪುರದಿಂದ ಬೆಳಗ್ಗೆ 7.30ಕ್ಕೆ ಹೊರಟು 9 ಗಂಟೆಗೆ ತುಮಕೂರಿಗೆ ತಲುಪಲಿದೆ. ಯಶವಂತಪುರದಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಮಧ್ಯಾಹ್ನ 1.30ಕ್ಕೆ ತುಮಕೂರು ತಲುಪಲಿದೆ. ತುಮಕೂರಿನಿಂದ ಯಶವಂತಪುರಕ್ಕೆ ಬೆಳಗ್ಗೆ 11.10ಕ್ಕೆ, ಸಂಜೆ 4.15ಕ್ಕೆ ವಿಶೇಷ ರೈಲು ವ್ಯವಸ್ಥೆ ಇರಲಿದೆ.
Advertisement
ಕೆಎಸ್‍ಆರ್ ಟಿಸಿ ಸಹ ಬೆಂಗಳೂರು-ತುಮಕೂರು ನಗರಗಳ ನಡುವೆ 100ಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆ ಇರಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
Advertisement
https://www.youtube.com/watch?v=jtctwPaRF7o
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv