– ಮೆಟ್ರಿಕ್ ನಂತರದ ವಿದ್ಯಾರ್ಥಿ ಹಾಸ್ಟೆಲ್‌ಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು 250 ಕೋಟಿ
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿಂದು ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ವಿವಿಧ ವಿಧೇಯಕಗಳು, ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟದ ಪ್ರಮುಖ ತೀರ್ಮಾನಗಳು
1. ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ತಿದ್ದುಪಡಿ
ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ) ವಿಧೇಯಕ, 2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
2. ಸಕಾಲ ಸೇವೆಗಳಿಗೆ ತಿದ್ದುಪಡಿ
ಕರ್ನಾಟಕ ಸಕಾಲ ಸೇವೆಗಳು (ತಿದ್ದುಪಡಿ) ವಿಧೇಯಕ, 2026ಕ್ಕೆ ಅನುಮೋದನೆ ನೀಡಲಾಗಿದೆ.
3. ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ
ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ, 2026ಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
4. ಬಿ ಖಾತಾ ಆಸ್ತಿಗಳಿಗೆ ಎ ಖಾತಾ ಸೌಲಭ್ಯ
ಭೂ ಖಾತರಿ ಯೋಜನೆಯಡಿ ಗ್ರಾಮೀಣ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಬರುವ ಬಿ ಖಾತಾ ಆಸ್ತಿಗಳನ್ನು ಎ ಖಾತಾ ಆಸ್ತಿಗಳಾಗಿ ಪರಿವರ್ತಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
5. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಅಭಿವೃದ್ಧಿ
ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 50 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು 250 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ.
6. ರಾಜ್ಯ ಹೂಡಿಕೆಗಳಿಗೆ ವೇಗ ನೀಡಲು ಸಲಹೆಗಾರರ ನೇಮಕ
ರಾಜ್ಯದಲ್ಲಿ ಹೂಡಿಕೆ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವ ಉದ್ದೇಶದಿಂದ M/s Boston Consulting Group India Pvt. Ltd. ಸಂಸ್ಥೆಯನ್ನು ಒಂದು ವರ್ಷದ ಅವಧಿಗೆ ಸಲಹೆಗಾರ/ಪಾಲುದಾರರಾಗಿ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ.
7. ಬೆಂಗಳೂರು ನಗರ ಭೂಸಾರಿಗೆ ಪ್ರಾಧಿಕಾರಕ್ಕೆ ತಿದ್ದುಪಡಿ
ಬೆಂಗಳೂರು ನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
8. PM-SETU ಯೋಜನೆಯಡಿ ITIಗಳ ಮೇಲ್ದರ್ಜೆಗೇರಿಕೆ
PM-SETU (ITIs) ಯೋಜನೆಯಡಿ ಆಯ್ದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು 2 Hub + 8 Spoke ಮಾದರಿಯಲ್ಲಿ, ಒಟ್ಟು 2,892 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಲಾಗಿದೆ.
9. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ
ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
10. ಉಪಖನಿಜ ರಿಯಾಯಿತಿ ನಿಯಮಗಳಿಗೆ ತಿದ್ದುಪಡಿ
ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

